ಇತ್ತೀಚಿನ ಸುದ್ದಿ
‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ: ಮುಖ್ಯಮಂತ್ರಿಗೆ ಸನ್ಮಾನ
05/10/2025, 21:19

ಬೆಂಗಳೂರು(reporterkarnataka.com): ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.