ಇತ್ತೀಚಿನ ಸುದ್ದಿ
ಕಾನ್ಫಿಡೆಂಟ್ ಗ್ರೂಪ್ ಚೇರ್‌ಮೆನ್ ಸಿ.ಜೆ. ರಾಯ್ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ ಉದ್ಯಮಿ?
30/01/2026, 21:18
ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಪ್ರತಿಷ್ಠಿತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್‌ಮೆನ್ ಸಿ.ಜೆ. ರಾಯ್ ಶುಕ್ರವಾರ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿ.ಜೆ. ರಾಯ್ ಅವರು ತನ್ನ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸಿಬ್ಬಂದಿಗಳು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಆಸ್ಪತ್ರೆ ಸೇರುವ ಮುನ್ನವೇ ಅವರು ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಕಾನ್ಫಿಡೆಂಟ್ ಗ್ರೂಪ್ ನ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮೂಟೆಗಟ್ಟಲೆ ದಾಖಲೆಗಳನ್ನ ಐಟಿ ಅಧಿಕಾರಿಗಳು ಒಯ್ದಿದ್ದರು.
ಸಿ.ಜೆ. ರಾಯ್ ಅವರು ಗನಚುಂಬಿ ಕಟ್ಟಡಗಳು, ಐಷಾರಾಮಿ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಿಗೆ ಪ್ರಸಿದ್ಧರಾಗಿದ್ದರು. ಬಿಗ್ ಬಾಸ್ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ಬಹುಮಾನಗಳನ್ನು ನೀಡುತ್ತಿದ್ದರು.












