ಇತ್ತೀಚಿನ ಸುದ್ದಿ
ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು ಮೊದಲ ಸಂಪುಟ ಸಭೆಯಲ್ಲಿ ಇಂದೇ ಜಾರಿ: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ
20/05/2023, 16:07
ಬೆಂಗಳೂರು(reporterkarnataka.com): ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲಿ ಇಂದೇ ಜಾರಿಗೊಳಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೆಯೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದೆ. ಈ ಬಾರಿಯೂ ನೀಡಿದ 5 ಗ್ಯಾರಂಟಿ ಯೋಜನೆಗಳಿಗೆ ಇಂದು ನಡೆಯುವ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದರು.
ಕಾಂಗ್ರೆಸ್ ಜಯಗಳಿಸದೆ. ಇದು ಕೇವಲ ಕಾಂಗ್ರೆಸ್ ನ ಜಯವಲ್ಲ. ರಾಜ್ಯದ 7 ಕೋಟಿ ಜನರ ಜಯ. ರಾಹುಲ್ ಗಾಂಧಿ ಅವರು ಆರಂಭಿಸಿದ ಭಾರತ್ ಜೋಡೋ ಯಾತ್ರೆಯು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿದೆ ಎಂದು ಸಿದ್ದರಾಮಯ್ಯ ನುಡಿದರು.