ಇತ್ತೀಚಿನ ಸುದ್ದಿ
ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪಂಜಿಮೊಗರು ವಾರ್ಡ್ ನಲ್ಲಿ ಕಾರ್ಪೋರೇಟರ್ ಅನಿಲ್ ಕುಮಾರ್ ಮನೆ ಮನೆಗೆ ತೆರಳಿ ಮತಯಾಚನೆ
17/04/2024, 15:12
ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ
ಮಂಗಳೂರು ಮಹಾನಗರ ಪಾಲಿಕೆಯ ಪಂಜಿಮೊಗರು ವಾರ್ಡ್ ನಲ್ಲಿ ಇಂದು ಮತಯಾಚನೆ ನಡೆಸಲಾಯಿತು.
ಸ್ಥಳೀಯ ಕಾರ್ಪೋರೇಟರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾದ ಅನಿಲ್ ಕುಮಾರ್ ಅವರು ತಮ್ಮ ಪಂಜಿಮೊಗರು ವಾರ್ಡಿನ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯ ಪರ ಮತಯಾಚಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಅನಿಲ್ ಕುಮಾರ್ ಅವರಿಗೆ ಸಾಥ್ ನೀಡಿದರು.