2:28 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

24/10/2024, 19:05

ಬೆಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿದ್ದರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆಗಳು ಎಂಬುದು ಮತ್ತೆ ಸಾಬೀತಾಗಿದೆ. ಅಲ್ಲದೆ, ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಉತ್ತೇಜನ ಕೊಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು