6:56 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್

24/04/2023, 21:29

ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ.
ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು.
ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿ.ಎಫ್‌.ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ, ಮತ್ತೊಂದು ಅಫ್ಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಂದೂಗಳ ರಕ್ಷಣೆಗೆ ಕಂಕಣ ಬದ್ಧವಾಗಿದೆ. ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬಾರದು, ಅದನ್ನು ತಡೆಯಲು ರಾಜ್ಯ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಈ ಎರಡೂ ಕಡೆ ಬಿಜೆಪಿ ಶಾಸಕ ಇರಬೇಕು. ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.
ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು