2:26 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕಾಂಗ್ರೆಸ್ – ಬಿಜೆಪಿ ನಾಯಕರ ಒಳ ಗುದ್ದಾಟ ಅರಿಯಷ್ಟು ಜನರು ಮೂರ್ಖರಲ್ಲ: ಜನತಾದಳ ಮುಖಂಡ ಹಾಲಳ್ಳಿ

11/09/2021, 10:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

2023ರ ವಿಧಾನಸಭೆ ಚುನಾವಣೆ ಧೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಸಂಘಟನೆ ಮತ್ತು ಯುವ ಶಕ್ತಿ ಪಡೆ ನಿರ್ಮಾಣಕ್ಕಾಗಿ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕಾರ್ಯ ತಾಲೂಕು ಜೆಡಿಎಸ್ ಪಕ್ಷದಿಂದ ಪ್ರಾರಂಭಿಸಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಅಣ್ಣಾರಾಯ ಹಾಲಳ್ಳಿ ಹೇಳಿದರು.

ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ನಮ್ಮ ನಾಯಕರಾದ ಗಿರೀಶ ಬುಟಾಳಿಯವರ ನೇತೃತ್ವದಲ್ಲಿ ಮುಂಬರುವ ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸ್ಥಳೀಯ ಚುನಾವಣೆಗೆ ಅಭ್ಯರ್ಥಿಗಳನ್ನು ಗುರುತಿಸುವುದರ ಜತೆಗೆ ಯುವ ನಾಯಕರುಗಳಿಗೆ ಪಕ್ಷದ ಜವಾಬ್ದಾರಿ ನೀಡಲಾಗುವುದು. ಚುನಾವಣಾ ಸಮಯದಲ್ಲಿ ಪಕ್ಷಕ್ಕೆ ಬರುವವರಿಗೆ ಮಣೆ ಹಾಕದಿರಲು ನಿರ್ಧರಿಸಲಾಗಿದೆ. ಅಲ್ಲದೇ ಇನ್ನು ಮುಂದೆ ಸಮಾಜ ಸೇವೆಗಾಗಿ ರಾಜಕೀಯಕ್ಕೆ ಬರುವ ಮತ್ತು ನಿಸ್ವಾರ್ಥ ಮನೋಭಾವದಿಂದ ಪಕ್ಷದ ಕಾರ್ಯ ಮಾಡುವವರಿಗೆ ಆದ್ಯತೆ ನೀಡಲಾಗುವುದು.

ತಾಲೂಕಿನ ಜನ ಎರಡು ರಾಷ್ಟ್ರೀಯ ಪಕ್ಷಗಳ ವೈಫಲ್ಯ ನೀತಿಗಳಿಗೆ ಬೇಸತ್ತಿರುವವರು. ಜನರು ನಮ್ಮ ಪಕ್ಷದತ್ತ  ಆಶಾ ಭಾವನೆ ತಾಳಿದ್ದಾರೆ ಮುಂಬರುವ ದಿನಗಳಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವ ಭರವಸೆ ನಮ್ಮ ಕರ್ತವ್ಯವಾಗಿದೆ,ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ  ಕಾರ್ಯಕ್ರಮ ಹಾಕಿಕೊಳ್ಳಲಾಗುವುದು. ನಮ್ಮದು ಪ್ರಾದೇಶಿಕ ಪಕ್ಷವಾಗಿರುವದರಿಂದ ನಾವು ಮಾತ್ರ ಅವರುಗಳ ಆಶೆಯಗಳಿಗೆ ದ್ವನಿಯಾಗಲಿದ್ದೆವೆ ಎಂಬ ಜನರ ಅಭಿಪ್ರಾಯ ಎಲ್ಲ ಕಡೆ ಕೇಳಿ ಬರುತ್ತಿದೆ ಇದಕ್ಕೆ ಪೂರಕವಾಗಿ ನಾವು ಕಾರ್ಯ ಮಾಡಲಿದ್ದೇವೆ.

ತಾಲೂಕಿನ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿನ ನಾಯಕರುಗಳ ಮಧ್ಯದಲ್ಲಿ ನಡೆದಿರುವ ರಾಜಕೀಯ ಒಳ ಗುದ್ದಾಟ ಅರಿಯದಷ್ಟು ಮೂರ್ಖರೇನು ಅಥಣಿ ಜನತೆ ಅಲ್ಲ. ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. 

ಅಥಣಿ ಅಭಿವೃದ್ಧಿಗಾಗಿ ಚಿಂತಿಸದವರು ಬರಿ ಟಿಕೇಟ್ ಚಿಂತನೆಯಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಈ ವೇಳೆ ಶಿವಾನಂದ ಐಗಳಿ, ಅಪ್ಪಾಸಾಬ ನಾಯಕ, ರವಿ ಹಂಜಿ, ಶಿದರಾಯ ಬಿರಾದರ, ಜಕ್ಕಪ್ಪಾ ಧರಿಗೌಡರ,ದೀಪಕ ಲೋಣಾರೆ,ಬಸು ಹೊಳಿಕಟ್ಟಿ, ಅಜೀತ ಕಾಂಬಳೆ ಸೇರಿದಂತೆ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು