7:03 AM Thursday2 - October 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ… ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್ ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿದೆ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ… ಮಡಿಕೇರಿ ಸಾರಿಗೆ ಬಸ್‌ ಡಿಪೋ ಎದುರು ನಿರ್ಮಿಸಲಾದ ಅನಧಿಕೃತ ಶೆಡ್‌ ತೆರವಿಗೆ ನಗರಸಭೆ… ಶಿಕ್ಷಣ ವ್ಯಕ್ತಿಯನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಲಿದೆ: ಸೈಂಟ್ ಜೋಸೆಫ್ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಬೆಂಗಳೂರು ನಗರ ರಸ್ತೆಗಳ ಪರಿಶೀಲನೆಗೆ ಮುಖ್ಯಮಂತ್ರಿಗಳ ಸಿಟಿರೌಂಡ್ಸ್

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿದೆ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

29/09/2025, 19:29

ಬೆಂಗಳೂರು(reporterkarnata.com): ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ 40% ಕಮಿಶನ್‌ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್‌ ಸರ್ಕಾರ ದುಪ್ಪಟ್ಟು ಕಮಿಶನ್‌ ಪಡೆಯುತ್ತಿದೆ ಎಂದು ಹೇಳಿ ಸಿಎಂಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್‌ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನದಾಸ್‌ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಇದಕ್ಕೆ ರಾಹುಲ್‌ ಗಾಂಧಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

*ಪರಿಹಾರದ ಬಗ್ಗೆ ತಿಳಿಸಿ:*
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್‌ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆಜೆ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಬಿಡದಿಯಲ್ಲಿ ಅಭಿವೃದ್ಧಿಗಾಗಿ ಪಡೆದ ಜಮೀನನ್ನು ಎಚ್‌.ಡಿ.ಕುಮಾರಸ್ವಾಮಿ ಕೈ ಬಿಟ್ಟಿದ್ದರು. ನಾವು ಕೂಡ ಆ ಯೋಜನೆ ಕೈ ಬಿಟ್ಟಿದ್ದೆವು. ಈಗ ರಿಯಲ್‌ ಎಸ್ಟೇಟ್‌ ಮೂಲಕ ದುಡ್ಡು ಹೊಡೆಯಲು ಡಿ.ಕೆ.ಶಿವಕುಮಾರ್‌ ಈ ಯೋಜನೆ ಮತ್ತೆ ತಂದಿದ್ದಾರೆ. ಆನೇಕಲ್‌, ಯಲಹಂಕ ಮೊದಲಾದ ಭಾಗಗಳಲ್ಲಿ ನಿವೇಶನ ಮಾಡಿದ ನಂತರ ಬಿಡದಿಗೆ ಏಕೆ ಹೋಗುತ್ತಿದ್ದಾರೆ? ಈಗಾಗಲೇ ಅನೇಕ ನಿವೇಶನಗಳು ಖಾಲಿ ಇದೆ. ಬಿಡದಿಯಲ್ಲಿ ರೈತರ ಜಮೀನುಗಳಿವೆ. ಅಂತಹ ಫಲವತ್ತಾದ ಭೂಮಿಯಲ್ಲಿ ರಿಯಲ್‌ ಎಸ್ಟೇಟ್‌ ಮಾಡಬಾರದು ಎಂದರು.
ಜಾತಿ ಸಮೀಕ್ಷೆಯಲ್ಲಿ ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲು ಪ್ರಯತ್ನ ಮಾಡುತ್ತಿದ್ದಾರೆ. ಈ ಸಮೀಕ್ಷೆಗೆ ಪೂರ್ವ ತಯಾರಿ ಮಾಡಿಲ್ಲ. ಕೇವಲ ಹದಿನೈದು ದಿನಗಳಲ್ಲಿ ಮುಗಿಸಿ ಎಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ. ಸಾಕಷ್ಟು ಸಮಯ ಇಟ್ಟುಕೊಂಡು ಸಮೀಕ್ಷೆ ಮಾಡಬೇಕು. ಇದು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯನ್ನು ಇಷ್ಟಪಡಿಸಲು ಮಾಡುತ್ತಿರುವ ಸಮೀಕ್ಷೆ ಎಂದರು.
ಹಬ್ಬದ ಸಮಯದಲ್ಲಿ ಬಸ್‌ ದರ ಹೆಚ್ಚಳ ಮೂಲಕ ಸರ್ಕಾರ ಹಿಂದೂಗಳಿಗೆ ಬರೆ ಎಳೆದಿದೆ. ಇದು ಹಿಂದೂಗಳನ್ನು ಟಾರ್ಗೆಟ್‌ ಮಾಡುವ ಸರ್ಕಾರ. ಧರ್ಮಸ್ಥಳ, ಚಾಮುಂಡಿ ಬೆಟ್ಟವನ್ನು ಈಗಾಗಲೇ ಟಾರ್ಗೆಟ್‌ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರು ಮತಾಂತರದ ರಾಯಭಾರಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು