8:17 PM Monday30 - March 2026
ಬ್ರೇಕಿಂಗ್ ನ್ಯೂಸ್
ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಬಗ್ಗೆ ಮನುವಾದಿಗಳಿಂದ ಲೇವಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

11/06/2023, 14:32

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳ ಪೈಕಿ 4 ಯೋಜನೆಗಳು ಮಹಿಳೆಯರಿಗೆ ಸಂಬಂಧಿಸಿದ್ದು, ಸಮಾಜದಲ್ಲಿ ಮಹಿಳೆಯರ ಸಬಲೀಕರಣ ನಡೆದರೆ ಮಾತ್ರ ದೇಶ ಅಭಿವೃದ್ಧಿ ಯಾಗಲು ಸಾಧ್ಯ. ಆದರೆ ಕಾಂಗ್ರೆಸ್ ನ ಗ್ಯಾರಂಟಿ ಬಗ್ಗೆ ಮನುವಾದಿಗಳು ಲೇವಡಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ರಾಜ್ಯಾದ್ಯಂತ ಉಚಿತ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಶೇ. 50ರಷ್ಟು ಮಹಿಳೆಯರಿದ್ದಾರೆ. ಮಹಿಳೆಯರ ಸಬಲೀಕರಣ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಆದರೆ ಮನುವಾದಿಗಳು ಇದನ್ನು ಟೀಕೆ ಮಾಡುತ್ತಿದ್ದಾರೆ. ನಾವು ಈ ಟೀಕೆಗಳಿಗೆಲ್ಲ ಉತ್ತರ ನೀಡೊಲ್ಲ. ಸರಕಾರದ ನಡೆಸಿದವರೇ ಎಡಬಿಡಂಬಿಗಳ ತರಹ ವರ್ತಿಸುತ್ತಿದ್ದಾರೆ. ಅವರಿಗೆ ಮಹಿಳೆಯರ ಅಭಿವೃದ್ಧಿ, ಮಹಿಳೆಯರ ಸಬಲೀಕರಣ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ನುಡಿದರು.


ಸಾರ್ವಜನಿಕ ಕ್ಷೇತ್ರದಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಂಡರೆ ಮಾತ್ರ ಸಮಾಜ ಮತ್ತು ದೇಶದ ಅಭಿವೃದ್ಧಿ ಸಾಧ್ಯ. ಈ ಹಿಂದೆ ನಮ್ಮ ದೇಶದಲ್ಲಿ ಶೇ.30ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ 2014ರ ಬಳಿಕ ಅದರ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಮನುವಾದಿಗಳು ಮಹಿಳೆಯರು ಹೊಸ್ತಿಲು ದಾಟಿ ಹೊರಗೆ ಹೋಗುವುದನ್ನು ಇಷ್ಟಪಡುವುದಿಲ್ಲ ಎಂಬುದನ್ನು ಇದು ಸೂಚಿಸುತ್ತದೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ರಿಜ್ವಾನ್, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು