12:06 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಗರಣಗಳ ಸರದಾರ; ಮೇವು ತಿಂದೋರು ಜೈಲಿನಲ್ಲಿದ್ದಾರೆ, ಈಗ ಪೇಪರ್ ತಿಂದೋರು ಕೂಡ ಜೈಲಿಗೆ ಹೋಗುತ್ತಾರೆ: ಸಿ.ಟಿ.ರವಿ

13/06/2022, 20:00

ಬೆಂಗಳೂರು(reporterkarnataka.com): ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯರ್ಶಿ ಸಿ.ಟಿ.ರವಿ ಭವಿಷ್ಯ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಎಂದು ಪ್ರಶ್ನಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಇದೀಗ ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು