7:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

25/03/2026, 15:47

ದಾವಣಗೆರೆ(reporterkarnataka.com): ದಾವಣಗೆರೆ ಬೈ ಎಲೆಕ್ಷನ್ ಅಖಾಡ ರಂಗೇರಿದ್ದು, ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ.
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗಿದ್ದಾರೆ.
ಕಾಂಗ್ರೆಸ್ ನಲ್ಲಿ ಅಲ್ಪ ಸಂಖ್ಯಾತರಿಗೆ ಅನ್ಯಾಯ ಆಗುತ್ತಿದೆ ಎಂದಿದ್ದಾರೆ. ಎಲೆಕ್ಷನ್ ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

*ನಾಮಪತ್ರ ವಾಪಸ್ ಇಲ್ಲ..!*
ನಾಮಪತ್ರ ಹಿಂಪಡೆಯುವಂತೆ ಒತ್ತಡವಿದ್ದರೂ ಸಾದಿಕ್ ಪೈಲ್ವಾನ್ ಬಿಗಿಪಟ್ಟು ಹಿಡಿದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು ಅಹಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನಾನು ಕಣಕ್ಕಿಳಿದಿದ್ದೇನೆ ಎಂದು ಹೇಳಿದರು. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು