12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್

31/01/2022, 17:59

ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಗೌರವ ತರುವ ಕೆಲಸ ಮಾಡುತ್ತೇವೆ. ಈ ಜವಾಬ್ದಾರಿ ತನ್ನ ಕ್ಷೇತ್ರದ ಮತದಾರರಿಗೆ ಸಂದ ಗೌರವಾಗಿದೆ ಎಂದು ಹೇಳಿದರು.

ತನ್ನ ಆಯ್ಕೆಗೆ ಕಾರಣರಾದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿದಂತೆ ಎಲ್ಲಾ ಹಿರಿಯ-ಕಿರಿಯ ನಾಯಕರಿಗೆ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪಕ್ಷಕ್ಕೆ ನನ್ನಿಂದಾಗುವ ಸಹಕಾರ ನೀಡುತ್ತೇನೆ.

ತಾನು ವಿದ್ಯಾರ್ಥಿಯಾಗಿದ್ದಾಗ ಹಿರಿಯ ನಾಯಕ ಜನಾರ್ದನ ಪೂಜಾರಿಯವರು ತನ್ನನ್ನು ಮೊದಲ ಬಾರಿಗೆ ಎನ್‌ಎಸ್‌ಯುಐನ ಕಾರ್ಯದರ್ಶಿಯನ್ನಾಗಿ ಮಾಡಿದ್ದರು. ಹೀಗಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಜತೆಗೆ ಜಿಲ್ಲೆಯ ಎಲ್ಲಾ ಹಿರಿಯ-ಕಿರಿಯ ಮುಖಂಡರುಗಳ ಆಶೀರ್ವಾದವನ್ನು ಕೇಳುತ್ತಿದ್ದೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು