6:00 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

25/03/2025, 17:58

* ಸಂವಿಧಾನ ಬದಲಿಸುವ ಹೆಳಿಕೆಗೆ ಡಿಕೆ ಶಿವಕುಮಾರ್‌ ಮೊದಲು ಕ್ಷಮೆಯಾಚಿಸಲು ಆಗ್ರಹ*

ನವದೆಹಲಿ(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಪಕ್ಷ ಜೀವಮಾನವಿಡಿ ಅಪಮಾನಿಸುತ್ತಲೇ ಬಂದಿದೆ. ಈಗಲೂ ಅದನ್ನೇ ಮುಂದುವರಿಸಿದೆ. ಇದಕ್ಕಾಗಿ ಕಾಂಗ್ರೆಸ್‌ ಪಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ದೇಶದ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್‌ ಅನೇಕ ಬಾರಿ ಸಂವಿಧಾನಕ್ಕೆ ಅಪಚಾರ ಮಾಡುತ್ತಲೇ ಇದೆ. ಇದು ಅವರ ಹಿಡನ್‌ ಅಜೆಂಡಾ ಆಗಿದೆ. ಅಂಬೇಡ್ಕರ್‌ ಜೀವಿತಾವಧಿಯಲ್ಲಿ ಪ್ರತಿ ಹಂತದಲ್ಲೂ ಅವರನ್ನು ಅವಮಾನಿಸಿದೆ. ಚುನಾವಣೆಯಲ್ಲಿ ಷಡ್ಯಂತ್ರ ನಡೆಸಿ ಸೋಲಿಸಿತು. ಆರ್ಟಿಕಲ್‌ ೩೫೦ ದುರುಪಯೋಗ ಪಡಿಸಿಕೊಂಡಿತು ಎಂದು ಆರೋಪಿಸಿದರು.
ಹಲವು ಬಾರಿ ಸಂವಿಧಾನ ತಿದ್ದುಪಡಿ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ಡಿ.ಕೆ. ಶಿವಕುಮಾರ್‌ ಮೂಲಕ ತನ್ನ ಗುಪ್ತ ಕಾರ್ಯಸೂಚಿಯನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್‌ ಯಾವತ್ತೂ ಅಂಬೇಡ್ಕರ್‌ ಅವರನ್ನು ಗೌರವಿಸಿಲ್ಲ. ಬದಲಾಗಿ ಅಪಮಾನ ಮಾಡುತ್ತಲೇ ಬಂದಿದೆ ಎಂದು ಕಿಡಿ ಕಾರಿದ ಸಚಿವ ಜೋಶಿ, ೧೯೫೧ರ ಚುನಾವಣೆ ಮೊದಲು ಮತ್ತು ತುರ್ತು ಪರಿಸ್ಥಿತಿ ವೇಳೆ ಹೀಗೆ ಎಲ್ಲ ಸಂದರ್ಭದಲ್ಲೂ ಕಾಂಗ್ರೆಸ್‌ ಹೇಗೆ ನಡೆದುಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ಹೇಳಿದರು.
ಈಗ ಕರ್ನಾಟಕದಲ್ಲಿ ಮುಸ್ಲಿಂರಿಗೆ ಶೇ.೪ರಷ್ಟು ಮೀಸಲಾತಿ ಕಲ್ಪಿಸಿರುವ ಕಾಂಗ್ರೆಸ್, ಮುಂದೊಂದು ದಿನ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿದೆ. ತನ್ನ ಮತ ಬ್ಯಾಂಕ್‌ಗಾಗಿ ಹಿಂದುಳಿದ ಸಮುದಾಯದವರಿಗೆ ತೀವ್ರ ಅನ್ಯಾಯ ಮಾಡುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು