ಇತ್ತೀಚಿನ ಸುದ್ದಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ ಪ್ರಚಾರ
23/04/2024, 09:56
ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ
info.reporterkarnataka@gmail.com
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 26ರಂದು ಬಸವಣ್ಣನ ನಾಡಾದ ವಿಜಯಪುರಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವರು.
ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಬಹಿರಂಗ ಸಭೆಯಲ್ಲಿ ಅವರು ಭಾಗವಹಿಸುವರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಮುಂತಾದ ನಾಯಕರು ಭಾಗವಹಿಸುವರು.