12:58 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

28/09/2022, 13:55

ಜಮಖಂಡಿ(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ 2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. 

ಜಮಖಂಡಿ ತಾಲೂಕಿನ ಹಿರೇಪಡಸಲಗಿಯ ಜಮಖಂಡಿ ಶುಗರ್ಸ್‌ ಆವರಣದಲ್ಲಿ ಕೃಷ್ಣಾತೀರರತ್ನ ಶಾಸಕ ದಿ.ಸಿದ್ದು ನ್ಯಾಮಗೌಡ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸಪೇಟೆಯಿಂದ ಕೂಡಲಸಂಗಮವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಕಳೆದ ಚುನಾವಣೆಯಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ನೀಡುವ ಹೆಚ್ಚುವರಿಯಾಗಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ವರ್ಷಕ್ಕೆ 10 ಸಾವಿರ ಕೋಟಿಯಂತೆ 5 ವರ್ಷದಲ್ಲಿ 58 ಸಾವಿರ ಕೋಟಿ ಹಣ ನೀರಾವರಿ ಯೋಜನೆಗಳಿಗೆ ನೀಡಿ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.

1987 ರಲ್ಲಿ ಕೃಷ್ಣಾತೀರ ರೈತ ಸಂಘ ನಿರ್ಮಿಸುವ ಮೂಲಕ ರೈತರ ಶ್ರಮದಾನದಲ್ಲಿ 1989 ರಲ್ಲಿ 11 ತಿಂಗಳ ಅವಧಿಯಲ್ಲಿ 90 ಲಕ್ಷ ವೆಚ್ಚದಲ್ಲಿ ಖಾಸಗಿ ಬ್ಯಾರೇಜ್‌ ನಿರ್ಮಿಸಿದ್ದು, ಇತಿಹಾಸವಾಗಿದೆ. ರೈತರ ಶ್ರಮದಾನದಿಂದ ನಿರ್ಮಾಣಗೊಂಡ ಬ್ಯಾರೇಜ್‌ದಿಂದ ಜಮಖಂಡಿ ಮತ್ತು ಅಥಣಿ ತಾಲೂಕಿನ 35 ಗ್ರಾಮಗಳ ರೈತರು 40 ಸಾವಿರ ಎಕರೆ ನೀರಾವರಿ ವ್ಯವಸ್ಥೆ ಹೊಂದಿದ್ದಾರೆ. ಬ್ಯಾರೇಜ್‌ ನಿರ್ಮಾಣದಿಂದ ಪ್ರಸಕ್ತ ರೈತರು ಆರ್ಥಿಕರಾಗಿ ಸಬಲರಾಗಿದ್ದು, ನೀರಾವರಿ ಇಲ್ಲದೇ ಹೋದರೆ ಕೃಷಿ ಲಾಭ ದಾಯಕವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು