1:18 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮೊದಲ ಪಟ್ಟಿ ಕೊನೆಗೂ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ: ಖಾದರ್, ಮಿಥುನ್ ರೈ, ರಕ್ಷಿತ್ ಸುವರ್ಣಗೆ ಟಿಕೆಟ್

25/03/2023, 10:28

ಬೆಂಗಳೂರು(reporterkarnataka.com):ರಾಜ್ಯ ವಿಧಾನಸಭಾ ಚುನಾವಣೆಗೆ
ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ಇದರಲ್ಲಿ 124 ಮಂದಿ ಅಭ್ಯರ್ಥಿಗಳ ಹೆಸರಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗೆ ದ.ಕ. ಜೆಲ್ಲೆಯಿಂದ ಯು.ಟಿ. ಖಾದರ್, ಮಿಥುನ್ ರೈ ಹಾಗೂ ರಕ್ಷಿತ್ ಸುವರ್ಣ ಅವರ ಹೆಸರು ಪ್ರಥಮ ಯಾದಿಯಲ್ಲಿದೆ.
ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರಿನಿಂದ, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ ಮೀಸಲು ಕ್ಷೇತ್ರದಿಂದ ಕೃಷ್ಣಪ್ಪ ಜಿ. ಕಣಕ್ಕಿಳಿಯಲಿದ್ದಾರೆ. ಇನ್ನೂ ಉಡುಪಿ ಜಿಲ್ಲೆಯ ಬೈಂದೂರಿನಿಂದ ಗೋಪಾಲ ಪೂಜಾರಿ, ಕುಂದಾಪುರದಿಂದ ದಿನೇಶ್ ಹೆಗ್ಡೆ, ಕಾಪುದಿಂದ ವಿನಯ ಕುಮಾರ್ ಸೊರಕೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಕಾರವಾರ ಅಂಕೋಲಾ ಕ್ಷೇತ್ರದಿಂದ ಸತೀಶ್ ಸೈಲ್, ಭಟ್ಕಳದಿಂದ ಮಂಕಾಳ ವೈದ್ಯ, ಹಳಿಯಾಳದಿಂದಾರ ಆರ್. ವಿ. ದೇಶಪಾಂಡೆ ಸ್ಪರ್ಧೆ ಮಾಡಲಿದ್ದಾರೆ,
ನಂಜನಗೂಡು ಕ್ಷೇತ್ರದಿಂದ ದ್ರವನಾರಾಯಣ ಪುತ್ರ ದರ್ಶನ್ ದ್ರವನಾರಾಯಣ ಹಾಗೂ ರಾಜಾಜಿನಗರ ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂ ಎಲ್ ಸಿ ಪುಟ್ಟಣ್ಣಗೆ ಟಿಕೆಟ್ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು