ಇತ್ತೀಚಿನ ಸುದ್ದಿ
ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ದುಷ್ಕರ್ಮಿಗಳು ಪರಾರಿ; ಹಾಡಹಗಲೇ ನಡೆದ ಘಟನೆ
01/03/2023, 18:27
ರಾಹುಲ್ ಅಥಣಿ ಬೆಳಗಾವಿ
info.reporter Karnataka@gmail.com
ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾದ ಘಟನೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ಪ್ರಶಾಂತ ಅಪರಾಜ ಮೇಲೆ ಹಲ್ಲೆ ನಡೆದಿದೆ. ಮಧ್ಯಾಹ್ನ ಸುಮಾರು ೪.೩೦ ಕ್ಕೆ ಪ್ರಶಾಂತ ಅವರನ್ನ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.


ಸದ್ಯ ಪ್ರಶಾಂತ ಅಪರಾಜ ಅವರನ್ನು ಕಾಗವಾಡ ಸಾರ್ವಜನಿಕ ತಾಲ್ಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಶಾಂತ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಶಾಸಕ ರಾಜು ಕಾಗೆ ಅವರು ಕಾಂಗ್ರೆಸ್ ಮುಖಂಡ ಪ್ರಶಾಂತ ಅಪರಾಜ ಅವರ ಆರೋಗ್ಯ ವಿಚಾರಣೆ ಮಾಡಿದ್ದಾರೆ.
ಕಾಗವಾಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ಸದ್ಯ ಪ್ರಕರಣ ಕಾಗವಾಡ್ ಪೋಲಿಸ್ ಠಾಣೆ ಮೆಟ್ಟಿಲೇರಿದೆ.














