10:29 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್

18/04/2023, 22:30

ಬೆಂಗಳೂರು(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ.
ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ
ತೀವ್ರ ಕುತೂಹಲ ಕೇರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಮತ್ತೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧೆ ಮಾಡಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮುಹಮ್ಮದ್ ಯೂಸುಫ್ ಸವಣೂರು ಹೆಸರನ್ನು ಘೋಷಣೆ ಮಾಡಲಾಗಿದೆ.
ಈಗಾಗಲೇ ಕಾಂಗ್ರೆಸ್ 224 ಅಭ್ಯರ್ಥಿಗಳ ಪೈಕಿ 209 ಅಭ್ಯರ್ಥಿಗಳನ್ನ ಚುನಾವಣಾ ಕಣಕ್ಕಿಳಿಸಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿತ್ತು. ಕಳೆದ ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಈಗ ಮತ್ತೆ 7 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ವಿವರ
* ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ – ಜಗದೀಶ್ ಶೆಟ್ಟರ್
*ಶಿಗ್ಗಾಂವಿ- ಮುಹಮ್ಮದ್ ಯೂಸುಫ್
*ಹುಬ್ಬಳ್ಳಿ -ಧಾರವಾಡ ಪಶ್ಚಿಮ- ಪ್ರದೀಪ್ ಚಿಂಚೋರೆ
*ಹರಿಹರ- ನಂದಗವಿ ಶ್ರೀನಿವಾಸ್
*ಚಿಕ್ಕಮಗಳೂರು- ಎಚ್. ಡಿ ತಮ್ಮಯ್ಯ
*ಶ್ರವಣಬೆಳಗೂಳ- ಎಂ.ಗೋಪಾಲಸ್ವಾಮಿ
*ಲಿಂಗಸುಗೂರು- ದುರ್ಗಪ್ಪ ಎಸ್.ಹೊಳಗೇರಿ

ಇತ್ತೀಚಿನ ಸುದ್ದಿ

ಜಾಹೀರಾತು