6:48 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು?

20/06/2021, 08:59

ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ.

ಜಮೀರ್ ಖಾನ್ ಅವರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವುದು ಈ ಎಲ್ಲ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಈ ಕುರಿತು ಜಮೀರ್ ಅವರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಆದರೆ ಜಮೀರ್ ಅವರು ಇದು ಯಾವುದಕ್ಕೂ ಕ್ಯಾರೇ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಮೀರ್
ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಶಿವಕುಮಾರ್ ಅವರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಜಮೀರ್ ಖಾನ್ ಅವರು ಹೋದ ಕಡೆಗಳೆಲ್ಲ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ, ಅವರನ್ನು 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುತ್ತೇನೆ ಎಂದು ಹೇಳಿಕೊಳ್ಳುತ್ತಿರುವುದು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿರುವ ಬಗ್ಗೆ ಶಿವಕುಮಾರ್ ತಕರಾರು ಎತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ಪದೇ ಪದೇ ನಿಂದನಾತ್ಮಕ ಹೇಳಿಕೆ ನೀಡುವುದು, ಏಕ ವಚನ ಪ್ರಯೋಗ ಮಾಡುವುದರಿಂದ ರಾಜ್ಯದಲ್ಲಿ ಒಕ್ಕಲಿಗರ ಮತ ಪಡೆಯುವುದು ಕಷ್ಟ ಎನ್ನುವುದು ಕೆಪಿಸಿಸಿ ಅಧ್ಯಕ್ಷರ ವಾದವಾಗಿದೆ. ಜತೆಗೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವುದು ಸರಿಯಲ್ಲ, ನಮ್ಮದು ಸಾಮೂಹಿಕ ನಾಯಕತ್ವ ಎನ್ನುವುದು ಶಿವಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ. ಹಾಗಾಗಿ
ರಾಹುಲ್ ಗಾಂಧಿ ಹುಟ್ಟುಹಬ್ಬದ ನಿಮಿತ್ತ ಶುಭ ಕೋರಲು ದೆಹಲಿಗೆ ಹೋಗಿರುವ ಶಿವಕುಮಾರ್ ಅವರು ಜಮೀರ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು