ಇತ್ತೀಚಿನ ಸುದ್ದಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ: ಶ್ರೀ ಶಿವಕುಮಾರ ಸ್ವಾಮೀಜಿಗೆ ನಮನ
01/04/2022, 00:16

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ನಡೆದಾಡುವ ದೇವರೇ ಎಂದು ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ನಮನ ಸಲ್ಲಿಸಿದರು.
ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಹುಟ್ಟು ಹಬ್ಬದ ನಿಮಿತ್ತ ರಾಹುಲ್ ಗಾಂಧಿ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಸ್ವಾಮೀಜಿಯವರ 116ನೇ ಜಯಂತ್ಯುತ್ಸವ ಮಠದಲ್ಲಿ ನಾಳೆ ನಡೆಯಲಿದೆ.
ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಈ ನಡುವೆ ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.