5:00 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರ

01/05/2024, 21:35

ಶಿವಮೊಗ್ಗ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್ ಪರವಾಗಿ ಬಹಿರಂಗ ಸಭೆಯಲ್ಲಿ ಭಾ಼ಷಣ ಮಾಡಲಿದ್ದಾರೆ.
ರಾಹುಲ್ ಗಾಂಧಿ ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಮಾತನಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ದತೆ ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಹುಲ್‍ ಗಾಂಧಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯದರ್ಶಿ ಮಯೂರು ಜಯಕುಮಾರ್ ಹಾಗೂ ಇನ್ನಿತರ ಮುಖಂಡರುಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬೈಂದೂರು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದಲೂ ಸಹ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ನಟ ಶಿವರಾಜ್‍ಕುಮಾರ್ ಅವರು ಸಹ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿ ಮತಯಾಚಿಸಿದ್ದಾರೆ. ಅವರು ಮೇ 4ರಂದು ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿಯಲ್ಲಿ ರೋಡ್ ಶೋ ಹಾಗೂ ಕಾರ್ನರ್ ಸಭೆ ನಡೆಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು