4:52 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಮಂಗಳೂರಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

04/08/2023, 20:32

ಮಂಗಳೂರು(reporterkarnataka.com): ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿದ್ದ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.


ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ರಾಹುಲ್ ಗಾಂಧಿ ಪ್ರಕರಣದಲ್ಲಿ ನ್ಯಾಯಕ್ಕೆ ಜಯಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದು ಸತ್ಯ ಮತ್ತು ಪ್ರೀತಿಗೆ ಸಂದ ಜಯ ಹಾಗೂ ಸುಳ್ಳು ಮತ್ತು ದ್ವೇಷಕ್ಕೆ ಆದ ಸೋಲು. ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮಾತನಾಡಿ, ದ್ವೇಷದಿಂದ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ. ಜನರಿಗೆ ಸತ್ಯಾಂಶ ತಿಳಿದಿದೆ. ದೇಶದಲ್ಲಿ ರಾಹುಲ್ ಗಾಂಧಿ ಅವರ ಬಗೆಗಿನ ಜನಪ್ರೀಯತೆ, ವರ್ಚಸ್ಸು ಹೆಚ್ಚುತ್ತಲೇ ಇದ್ದು, ಬಿಜೆಪಿಗೆ ಸಹಿಲಾಗುತ್ತಿಲ್ಲ ಎಂದರು.
ಈ ಸಂದರ್ಭ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ವಿಪಕ್ಷ ನಾಯಕ ನವೀನ್ ಡಿಸೋಜ,ಕೆಪಿಸಿಸಿ ವಕ್ತಾರ ಎ.ಸಿ.ವಿನಯರಾಜ್,ಅಶ್ರಫ್ ಬಜಾಲ್, ಸಂಶುದ್ದೀನ್ ಬಂದರ್, ಅನಿಲ್ ಕುಮಾರ್ ಪೂಜಾರಿ, ಲುಕ್ಮಾನ್ ಬಂಟ್ವಾಳ್, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ಕುಮಾರ್ ದಾಸ್, ಮನೋರಾಜ್ ರಾಜೀವ, ಡಾ.ಬಿ.ಜಿ.ಸುವರ್ಣ, ಪದ್ಮನಾಭ ಅಮೀನ್, ಸುಹಾನ್ ಆಳ್ವ, ತನ್ವೀರ್ ಶಾ, ಶಾಂತಲಾ ಗಟ್ಟಿ, ಟಿ.ಹೊನ್ನಯ್ಯ, ಶಬ್ಬೀರ್ ಎಸ್. ನೀರಜ್ ಚಂದ್ರಪಾಲ್, ನಝೀರ್ ಬಜಾಲ್, ವಹಾಬ್ ಕುದ್ರೋಳಿ, ಲಿಯಾಕತ್ ಶಾ, ರವಿ ಪೂಜಾರಿ, ಚೇತನ್ ಕುಮಾರ್, ವಿಕಾಸ್ ಶೆಟ್ಟಿ, ಜಯರಾಜ್ ಕೋಟ್ಯಾನ್, ರಮಾನಂದ ಪೂಜಾರಿ, ಮಜೀದ್ ಬಂದರ್, ಡಿ.ಎಂ.ಮುಸ್ತಫಾ, ನಿತ್ಯಾನಂದ ಶೆಟ್ಟಿ, ರಾಕೇಶ್ ದೇವಾಡಿಗ, ಅಲಿಸ್ಟರ್ ಡಿಕುನ್ಹ, ಮೊಹಮ್ಮದ್ ಕುಂಜತ್ತಬೈಲ್, ಸಲೀಂ ಮಕ್ಕ, ಚಂದ್ರಹಾಸ ಪೂಜಾರಿ, ಸ್ವಾನ್ ಡಿಸೋಜ, ಫಯಾಝ್ ಅಮ್ಮೆಮ್ಮಾರ್, ರೋಬಿನ್ ಅಂಚನ್, ಹಬೀಬ್ ಕಣ್ಣೂರ್, ಟಿ.ಸಿ.ಗಣೇಶ್, ಪ್ರವೀಣ್ ಊರ್ವ, ಪೃಥ್ವಿ ಸಾಲ್ಯಾನ್, ಸೀತಾರಾಂ ಶೆಟ್ಟಿ, ನವೀನ್ ರೈ, ಕಿಶೋರ್, ಚಂದಾವರ್ಕರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚಿತ್ತರಂಜನ್ ಶೆಟ್ಟಿ, ರಫೀಕ್ ಕಣ್ಣೂರ್, ಟಿ.ಕೆ.ಸುಧೀರ್, ಪವನ್ ಸಾಲ್ಯಾನ್, ಜೇಮ್ಸ್ ಶಿವಭಾಗ್, ನಜೀಬ್ ಮಂಚಿ, ಹ್ಯಾಂಡ್ಲಿ ಸೈಮನ್, ಸಾಹಿಲ್, ಓಂಶ್ರೀ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು