9:45 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ಸಿನಿಂದಾದ ಅನ್ಯಾಯ ಸರಿಪಡಿಸಲು ಬಾವಾಗೆ ಜೆಡಿಎಸ್ ಟಿಕೆಟ್: ಮಾಜಿ ಪ್ರಧಾನಿ ದೇವೇಗೌಡ

01/05/2023, 19:13

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕರಾಗಿದ್ದಾಗ 168 ಕೋಟಿ ರೂ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಸರಿಪಡಿಸಲು ಜನತಾ ದಳ ಅವರಿಗೆ ಟಿಕೆಟ್ ನೀಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡ ಹೇಳಿದರು.
ಸುರತ್ಕಲ್ ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತ ಕಾಲದಲ್ಲಿ ರೈತರ ಸಾಲ ಮನ್ನಾ ಮಾಡಲಾಯಿತು. ಮಹಿಳೆಯರು ನೆಮ್ಮದಿಯ ಬದುಕು ಕಂಡರು. ಮಂಗಳೂರು ಉತ್ತರ ಕ್ಷೇತ್ರ ಮೊಯ್ದೀನ್ ಬಾವಾ ಶಾಸಕರಾಗಿದ್ದ ಅವಧಿಯಲ್ಲಿ ಅಭಿವೃದ್ಧಿ ಕಂಡಿತು ಎಂದರು.


ಮಂಗಳೂರು ಉತ್ತರದಲ್ಲಿ ಬಾವಾ ಅವರಿಗೆ ಮೋಸದಿಂದ ಟಿಕೆಟ್ ತಪ್ಪಿಸಲಾಯಿತು. ಇದರ ಹಿಂದಿರುವ ವ್ಯಕ್ತಿಯ ಹೆಸರನ್ನು ನಾನು ಹೇಳುವುದಿಲ್ಲ. ಬಾವಾ ಅವರಿಗಾದ ಅನ್ಯಾಯ ಸರಿಪಡಿಸಲು ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ. ಮೇ 10 ಸಂಜೆ ವರೆಗೆ ನಿಮಗೆ ಅವಕಾಶವಿದೆ. ಬಾವಾ ಅವರನ್ನು ಗೆಲ್ಲಿಸಿ ಎಂದು ಕೈಜೋಡಿಸಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಬಿ. ಸದಾಶಿವ, ಮೂಡುಬಿದ್ರೆ ಅಭ್ಯರ್ಥಿ ಡಾ. ಅಮರಶ್ರೀ ಶೆಟ್ಟಿ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು