7:40 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸರಕಾರದಿಂದ ಭಯೋತ್ಪಾದಕರಿಗೆ ಕುಮ್ಮಕ್ಕು: ಶಾಸಕ ವೇದವ್ಯಾಸ ಕಾಮತ್ ಆರೋಪ

26/07/2023, 20:22

ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಆರೋಪಿಸಿದ್ದಾರೆ.
ಡಿಜೆ ಹಳ್ಳಿ, ಕೇಜೆ ಹಳ್ಳಿ ಗಲಭೆ ಅತ್ಯಂತ ಗಂಭೀರ ಸ್ವರೂಪದ ಪ್ರಕರಣವಾಗಿದೆ. ಕಾಂಗ್ರೆಸ್ ಪಕ್ಷದವರೇ ಆಗಿದ್ದ ದಲಿತ ಸಮುದಾಯದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ ಸೇರಿದಂತೆ ರಾತ್ರೋರಾತ್ರಿ ಇಡೀ ಡಿಜೆ ಹಳ್ಳಿ ಕೆಜೆ ಹಳ್ಳಿಯನ್ನ ಹೊತ್ತಿ ಉರಿಸಿದ ಬಗ್ಗೆ ನೂರಾರು ಮಂದಿ ಮೇಲೆ ಮುಖದ್ದಮೆ ದಾಖಲಿಸಲಾಗಿತ್ತು.
ಆದರೆ ಎಲ್ಲ ಗಲಭೆಕೋರರ ಮೇಲಿನ ಮೊಖದ್ದಮೆಯನ್ನು ಹಿಂಪಡೆಯಬೇಕು ಎಂದು ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಆಧಾರದಲ್ಲಿ ಸೂಕ್ತ ಪರಿಶೀಲನೆ ನಡೆಸುವಂತೆ ಗೃಹ ಸಚಿವರು ಪೊಲೀಸ್ ಇಲಾಖೆಗೆ ಪತ್ರ ಬರೆದಿರುವುದು ದುರ್ದೈವದ ವಿಚಾರ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಇಂತಹ ಗಂಭೀರ ಪ್ರಕರಣಗಳು ದಾಖಲಾಗಿರುವ ಸಂದರ್ಭದಲ್ಲಿ ಅವರ ಮೇಲಿನ ಮೊಖದ್ದಮೆಗಳನ್ನು ಹಿಂಪಡೆದರೆ ಸರಕಾರವೇ ಭಯೋತ್ಪಾದನೆಗೆ ಪರೋಕ್ಷವಾಗಿ ಬೆಂಬಲಿಸಿದಂತಾಗುತ್ತದೆ. ಹಿಂದೆ ಶಿವಮೊಗ್ಗದ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿ ಶಾರಿಕ್ ಎಂಬಾತ ಮಂಗಳೂರಿನಲ್ಲಿ ಬಾಂಬ್ ಸಾಗಿಸುವಾಗ ಸ್ಫೋಟಗೊಂಡಿರುವ ಉದಾಹರಣೆ ನಮ್ಮ ಮುಂದಿದೆ. ಹಾಗಿರುವಾಗ ಯಾವುದೇ ಕಾರಣಕ್ಕೂ ಗಲಭೆಕೋರದ ಮೇಲಿನ ಪ್ರಕರಣವನ್ನು ಹಿಂಪಡೆಯುವ ಅಥವಾ ರದ್ದುಪಡಿಸುವ ದುಸ್ಸಾಹಸಕ್ಕೆ ಸರಕಾರ ಕೈ ಹಾಕಬಾರದು ಎಂದು ಅವರು ಆಗ್ರಹಿಸಿದರು.
ಈ ಹಿಂದೆ ಇದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಿಎಫ್ ಐ ಮೇಲಿನ ನೂರಾರು ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರ ದುಷ್ಕೃತ್ಯಕ್ಕೆ ಪರೋಕ್ಷವಾಗಿ ಬೆಂಬಲಿಸಿರುವುದನ್ನು ಈ ದೇಶ ಕಂಡಿದೆ. ಅದೇ ಸಂಘಟನೆ ಭಯೋತ್ಪಾದನಾ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಕಾರಣಕ್ಕೆ ನಿಷೇಧಗೊಂಡಿರುವುದನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು.
ಇದೀಗ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಮೊಖದ್ದಮೆಯನ್ನು ಹಿಂಪಡೆದರೆ ಮುಂದೆ ಇದು ಕೂಡಾ ರಾಜ್ಯದಲ್ಲಿ ಗಂಭೀರ ಸ್ವರೂಪದ ಗಲಭೆಗಳಿಗೆ ಉತ್ತೇಜನ ಕೊಟ್ಟಂತಾಗಲಿದೆ. ಯಾವುದೇ ಕಾರಣಕ್ಕೂ ಈ ಆರೋಪಿಗಳ ಮೇಲಿನ ಪ್ರಕರಣವನ್ನು ಹಿಂದಕ್ಕೆ ಪಡೆಯುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಬಾರದು ಎಂದು ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು