ಇತ್ತೀಚಿನ ಸುದ್ದಿ
ಕಾಂಗ್ರೆಸ್ ಸರಕಾರದ ವಿರುದ್ಧ ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ನಿವಾಸಕ್ಕೆ ಬಿಜೆಪಿ ಶಾಸಕರ ಮುತ್ತಿಗೆ
03/07/2024, 18:06

ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾಸಕ್ಕೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮುಂತಾದವರು ಮಾತನಾಡಿದರು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.