3:37 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ದೇಶದ ಕ್ಷಮೆ ಕೇಳಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

23/02/2026, 21:33

* ಸಿಎಂ-ಡಿಸಿಎಂ ಗುದ್ದಾಟದ ಕಾರಣ 'ದಲಿತ ಸಿಎಂ' ಹೊಸ ಆಯಾಮ ನೀಡುತ್ತಿದ್ದಾರೆ ಅಷ್ಟೇ

* ಇಬ್ಬರ ಜಗಳದಲ್ಲಿ ರಾಜ್ಯದಲ್ಲಿ ಆಡಳಿತ, ಅಭಿವೃದ್ಧಿ ಅಧೋಗತಿಗತಿ

ಬೆಂಗಳೂರು(reporterkarnataka.com): AI ಶೃಂಗಸಭೆಯಲ್ಲಿ ಕಾಂಗ್ರೆಸ್ ವರ್ತನೆ ತೀವ್ರ ಆಘಾತಕಾರಿ ಮತ್ತು ಖೇದಕರವಾಗಿದೆ. ಸ್ವಪಕ್ಷದವರೇ ಆ ನಡೆಯನ್ನು ಟೀಕಿಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ನಾಯಕರು ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ನ ಈ ನಡೆಗೆ ಅವರ ಪಕ್ಷದವರೇ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಿದರು.
ಮಾರ್ಗರೇಟ್ ಆಳ್ವಾ ಅವರು ‘ಡಿಸಿಪ್ಲೇನ್, ಡಿಗ್ನೆಟಿ ಮತ್ತು ಸೆನ್ಸ್ ‘ ಇರಬೇಕಿತ್ತು ಎಂದಿದ್ದಾರೆ. ಇನ್ನು ಅಖಿಲೇಶ್ ಯಾದವ್ ಸಹ ಇದನ್ನೇ ವಿಭಿನ್ನವಾಗಿ ಹೇಳಿದ್ದಾರೆ. ಕಾಂಗ್ರೆಸ್ಸಿಗರು ಇನ್ನಾದರೂ ಸೌಜನ್ಯದಿಂದ ನಡೆದುಕೊಳ್ಳಲಿ ಎಂದು ಜೋಶಿ ಕಿವಿಮಾತು ಹೇಳಿದರು.
AI ಶೃಂಗ ಸಭೆಯಲ್ಲಿ 29 ವಿವಿಧ ದೇಶಗಳ ಪ್ರಮುಖರು, 45 ಮಂತ್ರಿಗಳು, ದೇಶದ ಉದ್ಯಮ ಪ್ರಮುಖರು, AI ಪ್ರಮುಖರು ಇದ್ದರು. ಇದ್ಯಾವುದನ್ನೂ ಲೆಕ್ಕಿಸದ ರೀತಿ ಕಾಂಗ್ರೆಸ್ ತೀರಾ ತೀರಾ ಅನುಚಿತ ವರ್ತನೆ ತೋರಿದೆ ಎಂದು ಜೋಶಿ ಕಿಡಿ ಕಾರಿದರು.
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಸಿಎಂ ಹುದ್ದೆ ಕಾಳಗದಲ್ಲಿ ರಾಜ್ಯದ ಹಿತವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ‘ಸಿಎಂ ಯಾರಾಗಬೇಕು?’ ಎಂಬುದು ಆ ಪಕ್ಷದವರಿಗೇ ಬಿಟ್ಟ ವಿಚಾರ. ಆದರೆ, ಮುಖ್ಯಮಂತ್ರಿ ಪಟ್ಟದ ಕಾಳಗದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿರುವುದಂತೂ ಸ್ಪಷ್ಟ. ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳು, ಎಲ್ಲೇ ಮೀರಿದ ಭ್ರಷ್ಟಾಚಾರ, ಆಂತರಿಕ ಭಿನ್ನಮತದ ಕಾರಣ ರಾಜ್ಯದ ಸ್ಥಿತಿ ಅಧೋಗತಿ ತಲುಪಿದೆ ಎಂದು ದೂರಿದರು.

*ದಲಿತ ಸಿಎಂ ಮಾಡುವ ನೈಜ ಕಾಳಜಿ ಕಾಂಗ್ರೆಸ್ಸಿಗಿಲ್ಲ:* ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಸಿಎಂ-ಡಿಸಿಎಂ ಕಾದಾಟದ ಕಾರಣ ಕಾಂಗ್ರೆಸ್ ಪಕ್ಷದಲ್ಲಿ ಈಗದಕ್ಕೆ ‘ದಲಿತ ಸಿಎಂ’ ಎಂಬ ಹೊಸ ಆಯಾಮ ಕೊಡುತ್ತಿದ್ದಾರೆ ಅಷ್ಟೇ, ಆದರೆ, ದಲಿತ ಸಿಎಂ ಮಾಡುವ ನೈಜ ಕಳಕಳಿ ಕಾಂಗ್ರೆಸ್ ನಾಯಕರಿಗೆ ಇಲ್ಲವೆಂದು ಪ್ರಹ್ಲಾದ ಜೋಶಿ ಚಾಟಿ ಬೀಸಿದರು.
ರಾಜ್ಯ ಕಾಂಗ್ರೆಸ್ಸಿಗರಿಗೆ ಹೇಳೋರು-ಕೇಳೋರು ಯಾರೂ ಇಲ್ಲದಂತಾಗಿದೆ. ಸಿಎಂ ಸಿದ್ದರಾಮಯ್ಯ ಶಿಷ್ಯಂದಿರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಶಿಷ್ಯಂದಿರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಈಗಿನ, ಮುಂದಿನ ಬಜೆಟ್ ಮಂಡಿಸುತ್ತಾರೆ ಎನ್ನೋರು ಕೆಲವರು, ಇದೇ ಇವರ ಲಾಸ್ಟ್ ಬಜೆಟ್ ಇನ್ನೂರು ಎನ್ನೋರು ಮತ್ತೆ ಕೆಲವರು. ಇವರ ಈ ಜಂಜಾಟದಲ್ಲಿ ಆಡಳಿತ ಎನ್ನುವುದು ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ಸತೀಶ ಜಾರಕಿಹೊಳಿ, ‘ಸರ್ಕಾರದಲ್ಲಿ ಭ್ರಷ್ಟಾಚಾರ ಈ ಮೊದಲೂ ಇತ್ತು’ ಎಂದಿದ್ದಾರೆ. ಅದನ್ನು ರುಜುವಾತು ಪಡಿಸುವಲ್ಲಿ ಇವರು ವಿಫಲರಾಗಿದ್ದಾರೆ. ಆದರೆ, ಇವರ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಜೋಶಿ ಕಿಡಿ ಕಾರಿದರು.

*ರಾಜ್ಯದೆಲ್ಲೆಡೆ ನೀರಿನ ಕ್ಷಾಮ:* ರಾಜ್ಯದಲ್ಲಿ ಆಗಲೇ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಇನ್ನೂ ಫೆಬ್ರವರಿ ತಿಂಗಳಲ್ಲೇ ನೀರಿನ ಕ್ಷಾಮ ಉಂಟಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನೀರಿನ ಬವಣೆ ಹೇಳ ತೀರದು. ರಸ್ತೆಗಳೂ ಅಧೋಗತಿ ಸ್ಥಿತಿ ತಲುಪಿವೆ. ಆದರೆ, ಇವರು ಈ ಮೂಲಭೂತ ಸೌಲಭ್ಯದ ಕಡೆ ಗಮನಹರಿಸೋದು ಬಿಟ್ಟು ಸಿಎಂ ಕುರ್ಚಿ ಗುದ್ದಾಟದಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು ಜೋಶಿ.

*ಚಂದ್ರು ಲಮಾಣಿ ಪ್ರಕರಣ ತನಿಖೆ ಆಗಲಿ:* ಇನ್ನು, ಶಾಸಕ ಚಂದ್ರು ಲಮಾಣಿ ಪ್ರಕರಣ ತನಿಖೆಯಾಗಲಿ. ಸ್ವಾಮೀಜಿ ಅಡಿಯೋ ಕ್ಲಿಪ್ ಹೊರ ಬಂದಿದೆ. ಬೇಕಂತಲೇ ಯಾರೋ ಟ್ರ್ಯಾಪ್ ಮಾಡಿಸಿದ್ದಾರೆಯೇ? ಹೇಗೆ? ಇದರ ಬಗ್ಗೆಯೂ ತನಿಖೆ ಆಗಬೇಕು ಎಂದರು.
ಬೇಸಿಕ್ ಕಲ್ಚರ್ ಇರುವ ಪರಿಣಾಮ ರಾಜ್ಯದಲ್ಲಿ ಕೈಗಾರಿಕೆ, ಅಭಿವೃದ್ಧಿ, ಸಂಪತ್ತು ಎಲ್ಲಾ ಸುಸೂತ್ರವಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಇದನ್ನು ಹಾಳು ಮಾಡುತ್ತಿದೆ. ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು