ಇತ್ತೀಚಿನ ಸುದ್ದಿ
ಕಾಂಗ್ರೆಸ್ ಸೋಲಿಸಲು ಕಾಂಗ್ರೆಸಿಗರೇ ಸಾಕು: ಮೂಡಿಗೆರೆ ಕೈ ಪಾಳಯದಲ್ಲಿ ಅಸಮಾಧಾನ ಸ್ಫೋಟ
29/12/2022, 21:07

ಚಿಕ್ಕಮಗಳೂರು(reporterkarnataka.com): ಮೂಡಿಗೆರೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಕೂಗಾಟ, ಗದ್ದಲ ಎಲ್ಲವೂ ನಡೆದಿದೆ.
ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ. ನಯನಾ ಮೋಟಮ್ಮ ಸೇರಿದಂತೆ ಜಿಲ್ಲಾಧ್ಯಕ್ಷ ಅಂಶುಮಂತ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ನಯನಾ ಮೋಟಮ್ಮ ಅವರು ಮೂಡಿಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ ನಯನಾ ಮೋಟಮ್ಮರಿಗೆ ಟಿಕೆಟ್ ನೀಡದಂತೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ನಯನಾ ವಿರುದ್ಧ ಕಾರ್ಯಕರ್ತರ ಕಡೆಗಣನೆ ಆರೋಪ ಕೇಳಿ ಬರುತ್ತಿದೆ. ನಯನ ಪರವಿದ್ದ ಕಾರ್ಯಕರ್ತರ ಜೊತೆಗೆ ಜಿಲ್ಲಾಧ್ಯಕ್ಷರು ಸಭೆ ನಡೆಸುತ್ತಿದ್ದರು. ನಯನ ಪರ-ವಿರೋಧ ಗುಂಪುಗಳ ನಡುವೆ ಗಲಾಟೆ ನಡೆದಿದೆ.