5:37 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಟಿಕೆಟ್ ಮಿಸ್: ವೈ.ಎಸ್. ವಿ. ದತ್ತ ನಿವಾಸ ಬಳಿ ಭಾರಿ ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಾಯ

07/04/2023, 11:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ವೈ.ಎಸ್.ವಿ ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಪಕ್ಷದ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ದತ್ತ ನಿವಾಸದ ಬಳಿ ರಾತೋರಾತ್ರಿ ಭಾರಿ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಜಮಾಯಿಸಿದ್ದಾರೆ.
ದತ್ತ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವಂತೆ ದತ್ತಾಗೆ ಅಭಿಮಾನಿಗಳ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ನ 2ನೇ ಪಟ್ಟಿಯಲ್ಲಿ ದತ್ತಗೆ ಟಿಕೆಟ್ ಮಿಸ್ ಆದ ಸುದ್ದಿ ಗೊತ್ತಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಕಡೂರು ಸಮೀಪದ ಯಗಟಿ ಬಳಿ ಇರುವ ಅವರ ನಿವಾದತ್ತ ಧಾವಿಸಿದ್ದಾರೆ. ದತ್ತ ಅಭಿಮಾನಿಗಳು ಈಗಲೂ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ.


ದತ್ತ ಅವರು ಗುರುವಾರ ಸಂಜೆ ಬೆಂಗಳೂರಿನಿಂದ ಯಗಟಿ‌ ಗ್ರಾಮದ ಮನೆಗೆ ಆಗಮಿಸಿದ್ದಾರೆ. ಆಗ ದತ್ತ ಅವರಿಗಾಗಿ ಸಾವಿರಾರು ಅಭಿಮಾನಿಗಳು ಕಾದು ಕುಳಿತ್ತಿದ್ದರು.
ಕಾರ್ಯಕರ್ತರು ಅಭಿಮಾನಿಗಳ ಜೊತೆ ಅವರು ಸಭೆ ನಡೆಸಲಿದ್ದಾರೆ. ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನಕ್ಕೆ ಎರಡು ದಿನ‌ ಸಮಯ ದತ್ತ ಕೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡ್ಬೇಕಾ ಎಂದು ದತ್ತ ಅಭಿಮಾನಿಗಳು ಪ್ರಶ್ನೆ ಕೇಳುತ್ತಿದ್ದಾರೆ.
ರಾಜ್ಯದಲ್ಲಿರುವ ಬೆರಳೆಣಿಕೆಯ ಸಜ್ಜನ, ಭ್ರಷ್ಟಾಚಾರ ರಹಿತ ರಾಜಕಾರಣಿಗಳಲ್ಲಿ ವೈ.ಎಸ್. ವಿ. ದತ್ತ ಅವರು ಅಗ್ರಪಂಕ್ತಿಯ ನಾಯಕರು. ಕಾಂಗ್ರೆಸ್ ನಲ್ಲಿ ಇವರಂತಹ ಸರಳ, ಶುದ್ಧ ಹಸ್ತದ ನಾಯಕ ಇನ್ನೊಬ್ಬರು ಸಿಗಲಾರರು ಎಂದೇ ಹೇಳಬಹುದು.
ಇವರು ಜನತಾ ದಳದಿಂದ ಶಾಸಕರಾಗಿದ್ದ ಅವಧಿಯಲ್ಲಿ ಬಾಡಿಗೆಯ ಆಟೋರಿಕ್ಷಾದಲ್ಲಿ ವಿಧಾನಸಭೆ ಅಧಿವೇಶನಕ್ಕೆ ತೆರಳುತ್ತಿದ್ದರು. ಶಾಸಕರ ಕಾರು ಪಾರ್ಕಿಂಗ್ ಸ್ಥಳದಲ್ಲಿ ಆಟೋ ಕಂಡು ಬಂದರೆ ದತ್ತ ಅವರು ಆಗಮಿಸಿದ್ದಾರೆ ಎಂದೇ ಅರ್ಥ. ಹಣ, ಆಸ್ತಿ ಮಾಡದ ದತ್ತ ಅವರನ್ನು ಜನತಾ ದಳ ಕೂಡ ಕಡೆಗಣಿಸಿತ್ತು. ಇದೀಗ ಕಾಂಗ್ರೆಸ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ವಿಶ್ವಾಸದ್ರೋಹ ಮಾಡಿದೆ ಎಂದು ಅವರ ಅಭಿಮಾನಿಗಳು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು