9:43 PM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಟಿಕೆಟ್: ಸುಳ್ಯದಲ್ಲಿ ತಣ್ಣಗಾಗದ ಬಂಡಾಯದ ಬಿಸಿ; ಅಭ್ಯರ್ಥಿ ಬದಲಾಯಿಸಲು ಮತ್ತೆ ಹಕ್ಕೊತ್ತಾಯ

09/04/2023, 13:19

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಹೊರಗಿನ ಬಿಸಿಲ ಝಳದೊಂದಿಗೆ ಸುಳ್ಯದಲ್ಲಿ ಚುನಾವಣೆ ಕಾವು ಏರತೊಡಗಿದೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟರೂ ಆಂತರಿಕ ವೈರುಧ್ಯದಿಂದ ಪಕ್ಷದೊಳಗೆ ಸ್ಪರ್ಧೆ ತೀವ್ರಗೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಬದಲಾವಣೆಯ ಕೂಗು ಕೇಳಿ ಬರುತ್ತಿದ್ದರೆ, ಕಾಂಗ್ರೆಸ್ ನಲ್ಲಿ ಬಂಡಾಯ ಬಿಸಿ ಜೋರಾಗಿಯೇ ಇದೆ.
ಸುಳ್ಯ ಮೀಸಲು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಪಕ್ಷದೊಳಗೆ ಫೈಟ್ ಜೋರಾಗಿಯೇ ನಡೆದಿತ್ತು. ಜಿ. ಕೃಷ್ಣಪ್ಪ ಅವರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಿಸಲಾಗಿತ್ತು. ಆದರೆ ಕಾಂಗ್ರೆಸ್ ನ ಇನ್ನೊಬ್ಬ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ನಂದ ಕುಮಾರ್ ಇದನ್ನು ತೀವ್ರವಾಗಿ ಖಂಡಿಸಿದ್ದರು. ನಂದ ಕುಮಾರ್ ಅಭಿಮಾನಿಗಳು ಸುಮಾರು ಒಂದು ಡಜನಿಗೂ ಹೆಚ್ಚು ಬಸ್ಸಿನಲ್ಲಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಕೂಡ ನಡೆಸಿದ್ದರು. ಆದರೆ ವಿಷಯ ಅಲ್ಲಿಗೆ ಮುಗಿಯಲಿಲ್ಲ. ಸದ್ಯದ ಪರಿಸ್ಥಿತಿ ಅವಲೋಕಿಸುವಾಗ ಬಂಡಾಯದ ಕಾವು ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ, ನಂದಕುಮಾರ್ ಅಭಿಮಾನಿ ಬಳಗದಿಂದ ಪ್ರತಿಭಟನೆ ಮುಂದುವರಿದಿದೆ.

ಕಡಬ ಹಾಗೂ ಸುಳ್ಯ ಭಾಗದಿಂದ ಡಜನಿಗೂ ಅಧಿಕ ಬಸ್ ಗಳಲ್ಲಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದ ನಂದಕುಮಾರ್ ಅಭಿಮಾನಿಗಳು ಒಂದು ರೀತಿಯಲ್ಲಿ ಕೆಪಿಸಿಸಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಇದೀಗ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್
ನೀಡಬೇಕು ಎಂದು ಪಟ್ಟು ಹಿಡಿದಿರುವ ಕಾರ್ಯಕರ್ತರು ಭಾನುವಾರ ಸುಳ್ಯ ವಿಧಾನಸಭಾ ಕ್ಷೇತ್ರದ ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ಸಭಾಂಗಣದ ಸುತ್ತ ಜಮಾವಣೆ ಆಗುತ್ತಿದ್ದಾರೆ. ಮಧ್ಯಾಹ್ನ 3ರ ಬಳಿಕ ಕಡಬ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ನಂದಕುಮಾರ್ ಅಭಿಮಾನಿ ಬಳಗದವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಎರಡು ಬ್ಲಾಕ್ ನಿಂದ 2 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದರೊಂದಿಗೆ ಸುಳ್ಯ ಕಾಂಗ್ರೆಸ್ ನಲ್ಲಿ ಕಾಣಿಸಿಕೊಂಡ ಬಂಡಾಯದ ಕಿಡಿ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಕಾರ್ಯಕರ್ತರಲ್ಲಿ ಯಾವುದೇ ಚರ್ಚೆ ಮಾಡದೇ ಜಿಲ್ಲಾ ನಾಯಕರು, ರಾಜ್ಯ ನಾಯಕರು ಏಕಾಏಕಿಯಾಗಿ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ
ಎಂದು ಸ್ಥಳೀಯ ಕಾರ್ಯಕರ್ತರು ರಿಪೋರ್ಟರ್ ಕರ್ನಾಟಕದ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ಘೋಷಣೆ ಮಾಡಿರುವ ಅಭ್ಯರ್ಥಿಯನ್ನು ಬದಲಾವಣೆ ಮಾಡಲೇಬೇಕು ಎಂದು ಹಠಕ್ಕೆ ಕಾರ್ಯಕರ್ತರು ಬಿದ್ದಿದ್ದಾರೆ. ಬಂಡಾಯ ಕಂಡು ಬಂದಲ್ಲೆಲ್ಲ ಕೆಪಿಸಿಸಿ ನಿಮ್ಮ ಕೆಲಸ ಮುಂದುವರಿಸಿ ಎಂದು ಟಿಕೆಟ್ ದೊರೆತ ಅಭ್ಯರ್ಥಿ ಗಳಿಗೆ ಸೂಚನೆ ನೀಡಿದೆ. ಆದರೆ ಮತ ಚಲಾಯಿಸುವವರು ಸ್ಥಳೀಯ ಮತದಾರರು ಎನ್ನುವ ಕಲ್ಪನೆ ಕೆಪಿಸಿಸಿಗೆ ಇದ್ದ ಹಾಗೆ ಕಾಣಿಸುತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು