10:25 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಯುವ ಮುಖಂಡರಿಂದ ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ

03/06/2021, 19:17

ಅಥಣಿ(reporterkarnataka news): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಇಲ್ಲದಂತಾಗಿದ್ದು ಜನರ ಬಗ್ಗೆ ಕಾಳಜಿ ಮಾಡದೆ ತಮ್ಮ ವೈಯಕ್ತಿಕ ಕೆಲಸಗಳಿಗಾಗಿ ತೊಡಗುತ್ತಿರುವ ಸರ್ಕಾರವಾಗಿದೆ ಎಂದು ರಾಯಬಾಗ್ ಕಾಂಗ್ರೆಸ್ ಯುವ ಮುಖಂಡ ಯಲ್ಲಪ್ಪ ವೈ ಶಿಂಗಿ ಹೇಳಿದರು.ಕೊರೊನಾ ವಾರಿಯರ್ಸ್ ಗಳಿಗೆ ಊಟ ಹಾಗೂ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 ಕುಡಚಿ ಮತಕ್ಷೇತ್ರದ ಶಾಸಕ ಪಿ. ರಾಜೀವ್ ಅವರು ಈ ಕೊರೊನಾ ದುಸ್ಥಿತಿಯಲ್ಲಿ ಜನರ ಬಗ್ಗೆ ಕಾಳಜಇ ತೋರುವುದು ಬಿಟ್ಟು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳನ್ನು ಹರಿಬಿಟ್ಟು ಜನರಿಗೆ ಮಂಕುಬೂದಿ ಹಚ್ಚುತ್ತಿದ್ದಾರೆ. ಜನರು ಆದಷ್ಟು ಪ್ರಜ್ಞಾವಂತರಾಗಬೇಕು. ಈ ಸಂದರ್ಭದಲ್ಲಿ  ನಿಮ್ಮ ಬೆಂಬಲಕ್ಕೆ ಯಾರಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ಕೇವಲ ಮಾತಿನ ಮೋಡಿಗೆ ಮರುಳಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು ಎಂದರು.

ಅಥಣಿ ತಾಲೂಕಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಂದಾಗಿ ಜನಜೀವನ ತುಂಬಾ ಅಸ್ತವ್ಯಸ್ತವಾಗಿದೆ. ಇದನ್ನೆಲ್ಲಾ ಹತೋಟಿಗೆ ತರಲು ಪುರಸಭೆಯ ಅಧಿಕಾರಿಗಳು ಹಾಗೂ ಪೊಲೀಸ್ ಠಾಣೆಯ ಅಧಿಕಾರಿಗಳು ಹಗಲು-ರಾತ್ರಿಯೆನ್ನದೆ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು