8:02 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ

12/04/2022, 18:04

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿಯಿರುವ ಹೋಟೆಲ್ ಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಯಾವುದೇ ಸೂಚನೆ ಇಲ್ಲದೆ ಮುತ್ತಿಗೆ ನಡೆಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸ್ವಲ್ಪ ಹೊತ್ತು ವಿಚಲಿತರಾದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳು ಕಾಂಗ್ರೆಸ್ ಕಾರ್ಯಕರ್ತರು ಹೋಟೆಲ್ ಗೆ ನುಗ್ಗುವುದನ್ನು ತಡೆದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು