5:08 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ

25/03/2025, 14:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterarnataka@gmail.com

ಮುಸಲ್ಮಾನರಿಗೋಸ್ಕರ ಈ ದೇಶದಲ್ಲಿ ಸಂವಿಧಾನವನ್ನೇ ನಾವು ಬದಲಾಯಿಸಬಹುದು ಎಂಬ ಮಾತನ್ನು ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ಈ ರಾಷ್ಟ್ರದಲ್ಲಿ ನೂರಾರು ಸಾರಿ ಸಂವಿಧಾನ ಅಮೆಂಟ್ ಮೆಂಟ್ ಆಗಿದೆ. 75-76 ಬಾರಿ ಕಾಂಗ್ರೆಸ್ ಸರ್ಕಾರವೆ ಮಾಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ದೇಶದ ದೃಷ್ಟಿಯಿಂದ ಸಂವಿಧಾನವನ್ನು ತಿದ್ದುಪಡಿ ಮಾಡಲಿಲ್ಲ.ತಮ್ಮ ಸ್ವಾರ್ಥದ ದೃಷ್ಟಿಯಿಂದ, ಮುಸಲ್ಮಾನರ ದೃಷ್ಟಿಯಿಂದ, ತಮ್ಮ ಓಟ್ ಬ್ಯಾಂಕ್ ದೃಷ್ಟಿಯಿಂದ, ಅಂಬೇಡ್ಕರ್ ಅವರು ಬರೆದಿದ್ದ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಸಂವಿಧಾನವನ್ನು ಅಮೆಂಟ್ ಮೆಂಟ್ ಮಾಡಿದ್ದಾರೆ. ಉಳಿದಂತೆ ವಾಜಪೇಯಿ ಅಥವಾ ಮೋದಿ ಸರ್ಕಾರ ಅಮೆಂಟ್ ಮೆಂಟ್ ಮಾಡಿದ್ದರೆ ರಾಷ್ಟ್ರದ ದೃಷ್ಟಿಯಿಂದ ಮಾಡಿದ್ದೇವೆ. ಆದರೆ ಈಗ ಮುಸಲ್ಮಾನರಿಗಾಗಿ ಸಂವಿಧಾನ ಬದಲಾವಣೆ ಮಾಡಬಹುದು ಎಂದು, ಈ ರೀತಿಯ ಹೇಸಿಗೆ ಮಾತನ್ನು ಆಡುತ್ತಾರೆ ಎಂದರು.
1947ರಲ್ಲಿ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆದಿರುವ ಕಾಂಗ್ರೆಸ್ ಇವತ್ತು ಪಾಠ ಕಲಿಯದೇ ಪುನಃ ಊರು ಊರಿನ ಮುಸಲ್ಮಾನರನ್ನು ಎತ್ತಿ ಕಟ್ಟಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ, ಕಾಂಗ್ರೆಸ್ ನ ದ್ರೋಹಿತನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಹಿಂದೂ ಎಂದರೆ ಕಾಂಗ್ರೆಸ್ ಗೆ ಎರಡನೇ ದರ್ಜೆಯ ಪ್ರಜೆಗಳು, ಹಾಗಾಗಿ ಇದನ್ನೆಲ್ಲಾ ನೆನಪಿನಲ್ಲಿ ಇಟ್ಟುಕೊಂಡು ಹಿಂದೂಗಳು ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಎಲ್ಲಿ ಇಡಬೇಕು ಎಂದು ನೋಡಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು