1:42 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಾಣ

09/04/2025, 21:47

ಬೆಂಗಳೂರು(reporterkarnataka.com): ಶಿಕ್ಷಣದ ಸರ್ವತೋಮುಖ ಬೆಳವಣಿಗೆ ದೃಷ್ಟಿಯಿಂದ ಎಂಬೆಸ್ಸಿ ಗಾಲ್ಫ್ ಲಿಂಕ್ ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ ಕ್ರೀಡಾಂಗಣ ನಿರ್ಮಿಸಿಕೊಟ್ಟಿದ್ದು, ಬುಧವಾರ ಕ್ಷೇತ್ರದ ಶಾಸಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಪತ್ನಿ ಸುಜಾ ಜಾರ್ಜ್, ಬೆಂಗಳೂರು ಧರ್ಮ ಪ್ರಾಂತ್ಯದ ಉಪ ಧರ್ಮಾಧ್ಯಕ್ಷ ಜೋಸೆಫ್ ಸುಸೈನಾಥನ್ ಇದನ್ನು ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸುಸೈನಾಥನ್, ಸಚಿವ ಕೆ.ಜೆ. ಜಾರ್ಜ್ ಅವರು ಶಿಕ್ಷಣ ಕ್ಷೇತ್ರಕ್ಕೆ ತೋರುತ್ತಿರುವ ಬದ್ಧತೆ ಶ್ಲಾಘನೀಯ. ಅನಿವಾರ್ಯ ಕಾರಣಗಳಿಂದ ಸಚಿವರು ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೂ ಅವರ ಪತ್ನಿ ಸುಜಾ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವುದು ಸಂತೋಷ ತಂದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಜಾ ಜಾರ್ಜ್ ಮಾತನಾಡಿ, “ಸುಂದರವಾದ ಆಟದ ಮೈದಾನ ನೋಡಿದಾಗ ನಮ್ಮ ಶಾಲಾದಿನಗಳು ನೆನಪಾದವು. ಪ್ರಸ್ತುತ ಒದಗಿಸಿರುವ ಈ ಕ್ರೀಡಾ ಸೌಲಭ್ಯದಿಂದ ವಿದ್ಯಾರ್ಥಿಗಳು ಈಗ ಎಷ್ಟು ಖುಷಿಯಾಗಿರಬಹುದು ಎಂದು ನಾನು ಊಹಿಸಬಲ್ಲೆ” ಎಂದು ಅವರು ಹೇಳಿದರು.
ಗುಜರಾತ್‌ನಲ್ಲಿ ಎಐಸಿಸಿ ಸಭೆಯ ನಿಮಿತ್ತ ಕೆ.ಜೆ.ಜಾರ್ಜ್ ತೆರಳಿದ್ದಾರೆ, ಮಗ ರಾಣಾ ಜಾರ್ಜ್ ಕೂಡ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದ ಕಾರಣ, ಆಟದ ಮೈದಾನ ಉದ್ಘಾಟನೆಗೆ ನಾನು ಬರುವಂತಾಯಿತು. ನಮ್ಮ ಕುಟುಂಬವನ್ನು ಇಲ್ಲಿ ಪ್ರತಿನಿಧಿಸಲು ಸಂತೋಷಪಡುತ್ತೇನೆ ಎಂದರು.
ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ದಾಸ್ ಜೋಸೆಫ್ ಮಾತನಾಡಿ, ಶಾಲಾ ಸೌಲಭ್ಯಗಳಿಗಾಗಿ ನಾವು ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಂಪರ್ಕಿಸಿದಾಗ, ಅವರು ರಾಣಾ ಜಾರ್ಜ್ ಅವರನ್ನು ತಕ್ಷಣವೇ ಸ್ಪಂದಿಸುವಂತೆ ತಿಳಿಸಿದರು. ಅದರ ಪರಿಣಾಮ ಈ ಕ್ರೀಡಾಂಗಣ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ಅರುಳಪ್ಪ ಮತ್ತಿತರರು ಇದ್ದರು. ಇದಕ್ಕೂ ಮುನ್ನ ಸುಜಾ ಜಾರ್ಜ್, ಉಪ ಧರ್ಮಾಧ್ಯಕ್ಷರಾದ ಜೋಸೆಫ್ ಸೂಸೈನಾಥನ್, ಪ್ರಾಂಶುಪಾಲರಾದ ದಾಸ್ ಜೋಸೆಫ್ ಮತ್ತು ವ್ಯವಸ್ಥಾಪಕ ಅರುಳಪ್ಪ ಸಾಂಕೇತಿಕವಾಗಿ ಫುಟ್‌ಬಾಲ್ ಕಿಕ್ ಮಾಡುವ ಮೂಲಕ ಕ್ರೀಡಾಂಗಣ ಉದ್ಘಾಟಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು