9:07 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ವೆನ್ ಲಾಕ್ ಆಸ್ಪತ್ರೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಸದ್ಯದಲ್ಲಿಯೇ ಪ್ರಾರಂಭ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

29/01/2026, 12:18

ಮಂಗಳೂರು(reporterkarnataka.com): ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು 70 ಕೋಟಿ ರೂಗಳ ವೆಚ್ಚದಲ್ಲಿ ಎರಡು ಹಂತದಲ್ಲಿ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ OPD ವಿಭಾಗವನ್ನು ನಿರ್ಮಾಣ ಮಾಡಲು ಸದ್ಯದಲ್ಲಿಯೇ ಟೆಂಡರ್ ಗೆ ಆಹ್ವಾನ ನೀಡಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು, ಸಿಸಿ ಟಿವಿ ಅಳವಡಿಸಲಾಗುವುದು.
ವೆನ್ಲಾಕ್ ಆಸ್ಪತ್ರೆಯನ್ನು ಒಂದು ರೀತಿಯ ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು