8:48 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

Tumkur | ತುಮಕೂರು ಭವಿಷ್ಯದ ಉದ್ಯೋಗ ಅವಕಾಶಗಳ ತವರೂರು: ಎಂ. ಎಸ್. ಪಾಟೀಲ್

25/06/2025, 11:39

ತುಮಕೂರು(reporterkarnataka.com): ಕಲ್ಪತರು ನಾಡು ತುಮಕೂರು ಜಿಲ್ಲೆ ಉದ್ಯೋಗ ಅವಕಾಶಗಳ ಬೃಹತ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಶ್ರೀದೇವಿ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ. ಎಸ್. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬೆಂಗಳೂರಿನ ನಂತರ ಬೃಹತ್ ಉದ್ಯೋಗ ಸೃಷ್ಟಿಸುವ ಭವಿಷ್ಯದ ನಗರವಾಗಿ ತುಮಕೂರು ಬೆಳೆಯಲಿದೆ ಹೀಗಾಗಿ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿದೆ. ದೇಶದ ಮತ್ತು ವಿದೇಶಿ ಬಂಡವಾಳದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂಡವಾಳ ಹೂಡಲು ತುಮಕೂರು ನಗರವನ್ನೇ ಆಯ್ಕೆ ಮಾಡಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಆಟೋಮೊಬೈಲ್ ಸಾಫ್ಟ್ ವೇರ್ ಸೇರಿದಂತೆ ಅನೇಕ ಉದ್ಯಮ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಮುಂದೆ ಬರುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಮೆಟ್ರೋ ಸಂಪರ್ಕ ತುಮಕೂರಿಗೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಈ ಎಲ್ಲಾ ಕಾರಣಗಳಿಂದ ಬೆಂಗಳೂರಿನ ನಂತರ ತುಮಕೂರು ೨ನೇ ಮತ್ತು ಭವಿಷ್ಯದ ನಗರವಾಗಲಿದೆ ಎಂದು ಹೇಳಿದರು.
ಕಾಲೇಜಿನ ಮೆಡಿಕಲ್ ಡೈರೆಕ್ಟರ್ ಡಾ. ರಮಣ್ ಹುಲಿನಾಯ್ಕರ್ ಮಾತನಾಡಿ, ಇಂದಿನ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಂಡರೆ ಉದ್ಯೋಗ ತಾನಾಗಿ ಹುಡುಕಿಕೊಂಡು ಬರುತ್ತದೆ. ಸಾಮಾಜಿಕ ಜಾಲತಾಣಗಳ (ಸೋಷಿಯಲ್ ಮೀಡಿಯಾ) ದಾಸರಾಗಬೇಡಿ ಮತ್ತು ಹೆಚ್ಚಿನ ಸಮಯವನ್ನು ಇದರಲ್ಲೇ ಕಳೆಯಬೇಡಿ. ಕಾಲೇಜಿನ ಪಾಠದ ಕಡೆ ಹೆಚ್ಚು ಗಮನ ಕೊಡಬೇಕು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಕೌಶಲ್ಯ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.
ನೆಲಮಂಗಲ ತಾಲೂಕಿನ ವಣಕಲ್ ಮಲ್ಲೇಶ್ವರ ಸಂಸ್ಥಾನ ಮಠದ ಡಾ.ಬಸವ ರಮಾನಂದ ಸ್ವಾಮೀಜಿ ಮಾತನಾಡಿ, ಆಧ್ಯಾತ್ಮ ಎಂದರೆ ಅಂತರಂಗ ಶುದ್ಧಿ. ಜಗತ್ತು ಸರಿಯಾದ ಹಾದಿಯಲ್ಲಿ ನಡೆಯಬೇಕು. ಪಾಪ, ವಂಚನೆ, ಮೋಸ ಇಲ್ಲದ ಸಮಾಜ ಇರಬೇಕು ಎನ್ನುವುದು ಧರ್ಮ. ಮೊಬೈಲ್ ಬಂದ ಮೇಲೆ, ಸೋಷಿಯಲ್ ಮೀಡಿಯಾಗಳ ಹಾವಳಿ ಹೆಚ್ಚಾದ ನಂತರ ಬಹಳಷ್ಟು ಜನರ ಆರೋಗ್ಯ ಹದಗೆಟ್ಟಿದೆ. ಇಂತಹ ಚಟಗಳಿಂದ ದೂರ ಇರುವುದನ್ನು ಕಲಿತರೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಶ್ರೀನಿವಾಸ್ ಮತ್ತು ಆಡಳಿತ ಅಧಿಕಾರಿ ಬ್ರಹ್ಮದೇವಯ್ಯ, ರಂಗಧಾಮಯ್ಯ, ಮೊದಲಾದವರು ಭಾಗಿಯಾಗಿದ್ದರು. ಇದೇ ಸಂದರ್ಭದಲ್ಲಿ ಹೆಚ್ಚು ಅಂಕ ಪಡೆದ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು