ಇತ್ತೀಚಿನ ಸುದ್ದಿ
ನಿರಂತರ ಸುರಿಯುತ್ತಿರುವ ಮಳೆ ; ಜಿಲ್ಲೆಯ ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
16/07/2025, 22:16

ಮಂಗಳೂರು:(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಮೂಡುಬಿದಿರೆ, ಪುತ್ತೂರು, ಬಂಟ್ವಾಳ, ಮಂಗಳೂರು, , ಮೂಲ್ಕಿ, ಉಳ್ಳಾಲ, ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.