3:43 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್

31/07/2021, 23:24

ಮಂಗಳೂರು (reporterkarnataka news): ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಅವರು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದ ಅವರು, ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು, ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‍ನಲ್ಲಿಯೇ ಇರಬೇಕು,  ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮಕೈಗೊಳ್ಳಬೇಕು, ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸಬೇಕು,  ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು, ಒಂದೇ ಕುಟುಂಬದಲ್ಲಿ 2 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಬೇಕು ಎಂದರು.

ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ತಿಳಿಸಿದ ಅವರು, ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್‍ನ್ನು ನಿಯೋಜಿಸಬೇಕು ಎಂದರು.

ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು ಹಾಗೂ ಕಡ್ಡಾಯವಾಗಿ ಮಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು.

ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್‍ನಲ್ಲಿ ಇರುವ ಬಗ್ಗೆ ಸಂಬಂಧಿಸಿದ  ತಹಶೀಲ್ದಾರ್‍ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದೂ, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.60 ಆನ್‍ಲೈನ್ ರಿಜಿಸ್ರ್ಟೇಷನ್ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ. 80 ಆನ್‍ಲೈನ್  ರಿಜಿಸ್ರ್ಟೇಷನ್ ಮತ್ತು ಶೇ. 20 ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಷ್ ಭಗವಾನ್ ಸೋನಾವಣೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಉಪವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು