ಇತ್ತೀಚಿನ ಸುದ್ದಿ
ಕೊರೊನಾ 3ನೇ ಅಲೆ ಎದುರಿಸಲು ಸಿದ್ಧರಾಗುವಂತೆ ಸಿಎಂ ಸೂಚನೆ: ವೈದ್ಯಕೀಯ ಸಿಬ್ಬಂದಿ ಹೆಚ್ಚಳಕ್ಕೆ ತಜ್ಞರ ಶಿಫಾರಸು
18/05/2021, 11:56
ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ಘಾಸಿಗೊಳಿಸಿರುವ ಕಾರಣ ಮೂರನೇ ಅಲೆ ಎದುರಿಸಲು ಈಗ್ಗಿಂದೀಗಲೇ ಸಿದ್ದರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿಯಾಗಿ ತಜ್ಞರ ತಂಡ ವೈದ್ಯಕೀಯ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿದೆ.
ಕೊರೊನಾ ಮೊದಲ ಅಲೆ ಎದುರಿಸುವಾಗಲೇ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತ್ತು. ಈಗಲೂ ಅದೇ ಪರಿಸ್ಥಿತಿ ಮುಂದುವರಿದಿದೆ. ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತಜ್ಞರು ಸಲಹೆ ಮಾಡಿದ್ದಾರೆ.
ಡಾಕ್ಟರ್, ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಇತರ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.