4:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಎದುರಿಸಲು ಸಿದ್ಧರಾಗುವಂತೆ ಸಿಎಂ ಸೂಚನೆ: ವೈದ್ಯಕೀಯ ಸಿಬ್ಬಂದಿ ಹೆಚ್ಚಳಕ್ಕೆ ತಜ್ಞರ ಶಿಫಾರಸು

18/05/2021, 11:56

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ಘಾಸಿಗೊಳಿಸಿರುವ ಕಾರಣ ಮೂರನೇ ಅಲೆ ಎದುರಿಸಲು ಈಗ್ಗಿಂದೀಗಲೇ ಸಿದ್ದರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿಯಾಗಿ ತಜ್ಞರ ತಂಡ ವೈದ್ಯಕೀಯ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿದೆ.

ಕೊರೊನಾ ಮೊದಲ ಅಲೆ ಎದುರಿಸುವಾಗಲೇ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತ್ತು. ಈಗಲೂ ಅದೇ ಪರಿಸ್ಥಿತಿ ಮುಂದುವರಿದಿದೆ. ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತಜ್ಞರು ಸಲಹೆ ಮಾಡಿದ್ದಾರೆ.

ಡಾಕ್ಟರ್,  ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಇತರ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು