9:18 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 826 ಜನ ಗುಣಮುಖ, 283 ಹೊಸ ಪ್ರಕರಣ ದೃಢ

25/05/2021, 10:34

ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್‍ನಿಂದ 826 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 283 ಕೊರೊನಾ ಪ್ರಕರಣಗಳು ಹಾಗೂ 7 ಮೃತ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. 

 ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  31489 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 27300 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 99, ಬಾದಾಮಿ 36, ಜಮಖಂಡಿ 48, ಹುನಗುಂದ 38, ಮುಧೋಳ 39, ಬೀಳಗಿ 23 ಜನರಲ್ಲಿ ಸೋಂಕು ದೃಢಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1627 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 610641 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 576925 ನೆಗಟಿವ್ ಪ್ರಕರಣ, ಹಾಗೂ 264 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 3925 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು