3:48 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೊರೊನಾ: ಬಾಗಲಕೋಟೆಯಲ್ಲಿ 885 ಜನರು ಗುಣಮುಖ; ಒಟ್ಟು 30703 ಮಂದಿಗೆ ಸೋಂಕು 

22/05/2021, 08:56

ಬಾಗಲಕೋಟೆ(reporterkarnataka news): ಜಿಲ್ಲೆಯಲ್ಲಿ ಕೋವಿಡ್‍ನಿಂದ 885 

ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  30703 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 25221 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 119, ಬಾದಾಮಿ 36, ಜಮಖಂಡಿ 35, ಹುನಗುಂದ 39, ಮುಧೋಳ 33, ಬೀಳಗಿ 13 ಜನರಲ್ಲಿ ಸೋಂಕು ದೃಢಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1633 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 603976 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 571040 ನೆಗಟಿವ್ ಪ್ರಕರಣ, ಹಾಗೂ 248 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 5234 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು