10:01 PM Saturday31 - January 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು

23/05/2021, 16:07

ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಗದಗ ಸಮೀಪದ ಗ್ರಾಮವೊಂದರ ಸುಮಾರು 45ರ ಹರೆಯದ ಮಹಿಳೆಯೊಬ್ಬರು ತನಗೆ ಕೊರೊನಾ ಬರಬಹುದು ಎಂಬ ಭಯದಿಂದಲೇ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಕೊರೊನಾ ಪರೀಕ್ಷೆ ನಡೆಸುವಂತೆ ಪರಿಚಯಸ್ಥರು ಆಕೆಗೆ ಸಲಹೆ ನೀಡಿದ್ದರು. ಆದರೆ ಭಯಭೀತರಾದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ಲಿಂಗೇಗೌಡ (68) ಎಂಬವರು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

ಕೆಪಿಸಿ ನಿವೃತ್ತ ಉದ್ಯೋಗಿಯಾಗಿರುವ ಲಿಂಗೇಗೌಡ ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು