5:58 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆ ಅನಿರ್ದಿಷ್ಟಾವಧಿ ಮುಂದೂಡಿಕೆ

03/08/2021, 20:50

ಮಂಗಳೂರು (reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಭಾಗದಿಂದ ಮಂಗಳೂರಿಗೆ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳಿಂದ ಸೋಂಕು ಹರಡುವುದನ್ನು ತಪ್ಪಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿ ಮುಂದೂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ನಿರ್ದೇಶಿಸಿರುತ್ತದೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ರಾಜ್ಯವಾದ ಕೇರಳದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು, ನೆರೆಯ ರಾಜ್ಯ ಹಾಗೂ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೆಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೊರಡಿಸಿದೆ. ಇದರಿಂದಾಗಿ ಅಂತರ್ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಕೂಡ ಅನಾನುಕೂಲವಾಗುವ ಸಾಧ್ಯತೆ ಇರುತ್ತದೆ. ಪ್ರಸ್ತುತ ಸನ್ನಿವೇಶವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಹಾಗೂ ಯಾವುದೇ ವಿನಾಯಿತಿಯನ್ನು ನೀಡಲು ಅವಕಾವಿಲ್ಲದಿರುವುದರಿಂದ, ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಸೂಚಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು