12:28 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ; ಆಗಸ್ಟ್ 30ರ ವರೆಗೆ ಗಡಿಯಲ್ಲಿನ ಮದ್ಯದಂಗಡಿಗಳು ಬಂದ್: ಜಿಲ್ಲಾಧಿಕಾರಿ ಆದೇಶ

18/08/2021, 09:37

ಮಂಗಳೂರು (reporterkarnataka.com:
ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದ ಹಿನ್ನೆಲೆಯಲ್ಲಿ ಕೊರೊನಾ ತಡೆಗಟ್ಟುವ ಅಂಗವಾಗಿ ಗಡಿಭಾಗದ ಮದ್ಯದಂಗಡಿಗಳನ್ನು ಆಗಸ್ಟ್ 30ರ ವರೆಗೆ ಬಂದ್ ಮಾಡಲಾಗಿದೆ.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ನೆರೆಯ ಕೇರಳ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ

ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ (26 ಐಎಂಎಲ್ ಹಾಗೂ 5 ಶೇಂದಿ) ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿರುತ್ತದೆ.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತ 1073 ರ ಕಲಂ 11 (3) ಹಾಗೂ ಕರ್ನಾಟಕಅಬಕಾರಿ (ಸನ್ನದುಗಳ ಸಾಮಾನ್ಯ ಪರತ್ತುಗಳು) ಕಾಯ್ದೆ 1965 ನಿಯಮ 21(1) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಗಾಗಲೇ ಹೊರಡಿಸಿರುವ ಆದೇಶವನ್ನು ಆಗಸ್ಟ್ 16 ರಿಂದ 30ರ ವರೆಗೆ ಮುಂದುವರಿಸಲಾಗಿದ್ದು, ಆ.30ರ ವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. 
                                 

ಇತ್ತೀಚಿನ ಸುದ್ದಿ

ಜಾಹೀರಾತು