8:14 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು