ಇತ್ತೀಚಿನ ಸುದ್ದಿ
ಕೊರೊನಾ ಗೆದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಾ. ದೊರೆಸ್ವಾಮಿ
12/05/2021, 19:44
ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಅವರು ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಹಾಗೂ ಸಿಬ್ಬಂದಿ ಈ ಕುರಿತು ಸಂತೋಷ ವ್ಯಕ್ತಪಡಿಸಿದ್ದಾರೆ. 104ರ ಹರೆಯದ ಹಿರಿಯ ಚೇತನ ಡಾ. ದೊರೆಸ್ವಾಮಿ ಕೊರೊನಾ ಪಾಸಿಟಿವ್ ಗೆ ಒಳಗಾಗಿದ್ದರು.