9:37 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಕರ್ಫ್ಯೂ; ಆಟೋ, ಕಾರಿಗೆ ಅನುಮತಿ

21/01/2022, 23:18

ಚೆನ್ನೈ(reporterkarnataka.com):
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಮುಂದಿನ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ. 

ತಮಿಳುನಾಡು ಸರ್ಕಾರವು ಕಳೆದ ಕೂಡಾ ಭಾನುವಾರದಂದು ರಾಜ್ಯದಾದ್ಯಂತ ಸಂಪೂರ್ಣ ಕರ್ಫ್ಯೂ ವಿಧಿಸಿತ್ತು. ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ಕೊರೊನಾ ಮತ್ತು ಒಮೆಗಾ ವೈರಸ್‌ನ ಹಿನ್ನಲೆಯಿಂದ, ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜನವರಿ 23 ರ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುತ್ತದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ.

ಭಾನುವಾರದ ಪೂರ್ಣ ಕರ್ಫ್ಯೂ ದಿನದಂದು ಕಳೆದ ಭಾನುವಾರ (ಜನವರಿ16) ಪೂರ್ಣ ಕರ್ಫ್ಯೂ ಸಮಯದಲ್ಲಿ ಜಾರಿಗೊಳಿಸಲಾದ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅನುಮತಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅಂದು ವಿಧಿಸಿದ್ದ ಚಟುವಟಿಕೆಗಳ ಮೇಲಿನ ನಿರ್ಬಂಧಗಳು ಈ ವಾರ ಕೂಡಾ ಮುಂದುವರಿಯಲಿವೆ ಎಂದು ಅದು ಹೇಳಿದೆ.

ಅಲ್ಲದೆ, ಬೇರೆ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಪ್ರಯಾಣಿಕರ ಹಿತದೃಷ್ಟಿಯಿಂದ, ಸಾಮಾನ್ಯ ಆಟೋಗಳು, ಬುಕ್ ಮಾಡಿರುವ ಬಾಡಿಗೆ ಕಾರುಗಳು ಚೆನ್ನೈ ಸೆಂಟ್ರಲ್, ಎಗ್ಮೋರ್ ರೈಲು ನಿಲ್ದಾಣ ಮತ್ತು ಕೊಯಮತ್ತೂರು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

ಇದು ಜಿಲ್ಲೆಯ ರೈಲು ನಿಲ್ದಾಣಗಳು ಮತ್ತು ಉಪನಗರ ಬಸ್ ನಿಲ್ದಾಣಗಳಿಗೆ ಮಾತ್ರ ಅನ್ವಯಿಸುತ್ತದೆ.

ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ವಾಲಿನ್‌ ಕೋರಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು