6:58 AM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

03/05/2024, 01:43

ಹೊಸದಿಲ್ಲಿ(reporterkarnataka.com): ಭಾರತದಲ್ಲಿ ಕೊರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ನೀಡಲಾಗಿದ ಎರಡು ಲಸಿಕೆಗಳಲ್ಲಿ ಒಂದಾದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದಂತೆ ಅಡ್ಡಪರಿಣಾಮ ಬೀರುವ ಸಾಮರ್ಥ್ಯ ಕೋವಿಶೀಲ್ಡ್‌ಗೆ ಇದೆ ಎಂದು ಅದನ್ನು ತಯಾರಿಸಿರುವ ಆಸ್ಟ್ರಾಜೆನೆಕಾ ಲಂಡನ್‌ನ ನ್ಯಾಯಾಲಯದೆದುರು ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶಾಲ್‌ ತಿವಾರಿ ಎಂಬುವವರು ಅರ್ಜಿ ದಾಖಲಿಸಿದ್ದಾರೆ.
ತಾನು ತಯಾರಿಸಿದ ಲಸಿಕೆ ಪಡೆದವರಲ್ಲಿ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ನೊಂದಿಗೆ (ಟಿಟಿಎಸ್) ಅಂದರೆ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ ಸಂಖ್ಯೆ ಇಳಿಕೆ ಸಮಸ್ಯೆ ಎದುರಾಗಲಿದೆ ಎಂಬುದನ್ನು ಆಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂಬುದಾಗಿ ಅರ್ಜಿ ವಿವರಿಸಿದೆ.
ಕೋವಿಶೀಲ್ಡ್‌ನ ಅಡ್ಡಪರಿಣಾಮಗಳು ಮತ್ತು ಅದರ ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ತಜ್ಞರನ್ನೊಳಗೊಂಡ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯ ವೈದ್ಯಕೀಯ ತಜ್ಞರ ಸಮಿತಿಯನ್ನು ಸರ್ವೋಚ್ಚ ನ್ಯಾಯಾಲಯ ರಚಿಸಬೇಕು ಎಂದು ಮನವಿ ಮಾಡಲಾಗಿದೆ.
ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರ ಈ ಸಮಸ್ಯೆಗೆ ಆದ್ಯತೆಯಿಂದ ಬಗೆಹರಿಸಿದರೆ ಭವಿಷ್ಯದಲ್ಲಿ ಭಾರತೀಯರ ಆರೋಗ್ಯ ಮತ್ತು ಜೀವನಕ್ಕೆ ಅಪಾಯ ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕೋವಿಡ್ ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದ ಅಥವಾ ಸಾವನ್ನಪ್ಪಿದ ನಾಗರಿಕರಿಗೆ ಪರಿಹಾರ ನೀಡಲು ಲಸಿಕೆ ಹಾನಿ ಪಾವತಿ ವ್ಯವಸ್ಥೆ ರೂಪಿಸಲು ನ್ಯಾಯಾಲಯ ಆದೇಶಿಸಬೇಕು ಎಂದು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು