12:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೋನಾ ಮತ್ತೆ ಏರಿಕೆಯ ಭೀತಿ; ವಿಮಾನದೊಳಗೆ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ: ದೆಹಲಿ ಹೈಕೋರ್ಟ್ ನಿರ್ದೇಶನ

04/06/2022, 10:59

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೊರೊನಾ ಮತ್ತೆ ಸದ್ದು ಮಾಡುತ್ತಿದೆ. ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.

ವಿಮಾನ ಪ್ರಯಾಣದ ಸಮಯದಲ್ಲಿ ಕೋವಿಡ್-19 ನಿಯಮಗಳ ಉಲ್ಲಂಘನೆಯ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ, ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಗಳಲ್ಲಿ ಮಾಸ್ಕ್ ಧರಿಸದಿದ್ದರೆ ಭಾರೀ ದಂಡ ವಿಧಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಅಗತ್ಯವಿದ್ದರೆ ಈ ನಿಯಮಗಳನ್ನು ಉಲ್ಲಂಘಿಸುವವರನ್ನು ಪ್ರವೇಶ ನಿರ್ಬಂಧಿಸಬೇಕು ಎಂದು ಪೀಠವು ವರದಿ ಮಾಡಿದೆ.

ಫ್ಲೈಟ್ ಪರ್ಸರ್‌ಗಳು, ಗಗನಸಖಿಯರು, ಪೈಲಟ್‌ಗಳು ಸೇರಿದಂತೆ ವಿಮಾನ ನಿಲ್ದಾಣಗಳಲ್ಲಿನ ವಿಮಾನಯಾನ ಸಿಬ್ಬಂದಿಯನ್ನು ಅಧಿಕೃತಗೊಳಿಸಲು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಪ್ರತ್ಯೇಕ ನಿರ್ಬಂಧಿತ ನಿರ್ದೇಶನಗಳನ್ನು ನೀಡಬೇಕು. ನಿಯಮಗಳನ್ನು ಪಾಲಿಸದ ಪ್ರಯಾಣಿಕರು ಅಥವಾ ಸಿಬ್ಬಂದಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಹೇಳಿದೆ.
[04/06, 9:06 am] Ashok Kalladka: ಪಿಎಫ್ ಖಾತೆದಾರರಿಗೆ ಶೇ. 8.1ರಷ್ಟು ಬಡ್ಡಿ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರ ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಒಪ್ಪಿಗೆ ಸೂಚಿಸಿದೆ. ಇಪಿಎಫ್ ಒ ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಸಮ್ಮತಿಸಿದೆ.

ಈ ಮೂಲಕ ಶೀಘ್ರವೇ 2021 -22 ನೇ ಸಾಲಿನ ಠೇವಣಿಗಳಿಗೆ ಬಡ್ಡಿ ಜಮಾ ಮಾಡಲಾಗುವುದು.

2021-22 ಕ್ಕೆ ಉದ್ಯೋಗಿ ಭವಿಷ್ಯ ನಿಧಿ ಅಥವಾ ಇಪಿಎಫ್ ಠೇವಣಿಗಳ ಮೇಲೆ ಶೇ. 8.1 ರಷ್ಟು ಬಡ್ಡಿ ದರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆಯ ನಂತರ ಬಡ್ಡಿ ದರ ಸೂಚಿಸಲಾಗುತ್ತದೆ, ಅದರ ನಂತರ ಬಡ್ಡಿಯನ್ನು ಅದರ ಚಂದಾದಾರರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಮಾರ್ಚ್‌ ನಲ್ಲಿ ನಿವೃತ್ತಿ ನಿಧಿ ಸಂಸ್ಥೆ ಇಎಫ್‌ಪಿಒ ಅ ಸಂಸ್ಥೆಯು ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು 2021-22 ಹಣಕಾಸು ವರ್ಷದಲ್ಲಿ ಹಿಂದಿನ ವರ್ಷದಲ್ಲಿ ಶೇ. 8.5 ರಿಂದ ನಾಲ್ಕು ದಶಕಗಳ ಕನಿಷ್ಠ ಶೇ. 8.1 ಕ್ಕೆ ಕಡಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು