ಇತ್ತೀಚಿನ ಸುದ್ದಿ
ಕೊರೊನಾ ಪರಿಸ್ಥಿತಿ: ಸಿಎಂ-ಜಿಲ್ಲಾಧಿಕಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ; ಲಾಡ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ
18/05/2021, 09:58
ನವದೆಹಲಿ(reporterkarnataka news):
ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಇಂದು) ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.
ಮೇ 24 ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ಬಂದಿದೆ.
ಮೇ 24 ರ ನಂತರ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಪ್ರಧಾನಿ ಮೋದಿ ಸಿಎಂ ಮತ್ತು ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಶಿವಮೊಗ್ಗ, ಧಾರವಾಡ, ಕಲಬುರಗಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದೆ.